ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟ ಕ ರಾಜ್ಯ ಕ್ರಿಟೆಟ್ ಸಂಸ್ಥೆಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ #Karnataka State Cricket Association Board of Directors Election ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಭರ್ಜರಿ ಜಯ ದಾಖಲಿಸಿದ್ದಾರೆ.
ಮಂಡಳಿಯ ಚುನಾವಣೆಯಲ್ಲಿ ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಡಿ.ಎಸ್. ಅರುಣ್ ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ ಎಂದಿದ್ದಾರೆ.
ಅಲ್ಲದೇ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದಿದ್ದಾರೆ.
ಪ್ರಮುಖವಾಗಿ, ಶಿವಮೊಗ್ಗ ವಲಯದಲ್ಲಿ ಕ್ರಿಕೆಟ್ ಪಂದ್ಯಗಳು ಹಾಗೂ ಟೂರ್ನಿಮೆಂಟ್’ಗಳನ್ನು ಉತ್ತಮವಾಗಿ ಸಮನ್ವಯಗೊಳಿಸುವುದು, ಕ್ರಿಕೆಟ್’ಗ ಸಂಬಂಧಿಸಿದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು, ಶಿಸ್ತು ಮತ್ತು ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವುದು ತಮ್ಮ ಆದ್ಯತೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















