ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ಅಲ್ಲಿನ ಕಠಿಣ ನಿಯಮಗಳಿಂದಾಗಿ ತತ್ತರಿಸಿದ್ದಾರೆ ಎನ್ನಲಾಗಿದ್ದು, ಇದರಿಂದಾಗ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದು, ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್, #Darshan ಸಹ ಕೈದಿಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆ. ಈ ವಿಚಾರಗಳ ಬಗ್ಗೆ ಜೈಲಿನಲ್ಲಿ ಜಗಳಗಳೇ ನಡೆದಿವೆ ಎಂದು ಹೇಳಲಾಗಿದೆ.
ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳು ಕುರಿತು ಮಾಧ್ಯಮಗಳು ಸುದ್ದಿ ಮಾಡುತ್ತಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮಗಳಿಗೆ ಬ್ರೇಕ್ ಹಾಕಿದ್ದಾರೆ.
ಈಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಕಠಿಣವಾಗಿದ್ದು, ಈ ನಿಯಮಗಳಿಂದ ನಟ ದರ್ಶನ್ ತತ್ತರಿಸಿಹೋಗಿದ್ದಾರೆ ಎಂದು ಹೇಳಲಾಗಿದೆ.
ಜೈಲಿನ ಕಠಿಣ ನಿಯಮಗಳಿಂದಾಗಿ ಬೇಸತ್ತಿರುವ ದರ್ಶನ್, ಮಾನಸಿಕ ಒತ್ತಡಕ್ಕೆ ಒಳಗಾಗಿ ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.
ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.
ಇನ್ನು ದರ್ಶನ್ ಜೊತೆ ಒಂದೇ ಸೆಲ್‌ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲಿ ಜೈಲು ಸೇರಿದವರಾಗಿದ್ದಾರೆ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















