ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು, ಕೊಡಗಿನ ಇತಿಹಾಸದಲ್ಲೇ ಇಂತಹ ತೀರ್ಪು ಮೊದಲ ಬಾರಿಯಾಗಿದೆ.
ಈ ಕುರಿತಂತೆ ವಿರಾಜಪೇಟೆ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿದ್ದು, ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಕೇರಳ ಮೂಲದ ಆರೋಪಿ ಗಿರೀಶ್ ಎಂಬಾತನೇ ಈ ಮರಣದಂಡನೆಗೆ ಗುರಿಯಾದ ವ್ಯಕ್ತಿ.
ಪ್ರಕರಣದ ಹಿನ್ನೆಲೆಯೇನು?
2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಬರ್ಬರವಾಗಿ ಹತ್ಯೆ ಮಾಡಿದ್ದ.
ಮೃತಪಟ್ಟವರನ್ನು ನಾಗಿ (35), ಆಕೆಯ ಮಗಳು ಕಾವೇರಿ (7) ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು. ಆರೋಪಿ ಗಿರೀಶ್ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ.
ಹತ್ಯೆಯ ಭೀಕರತೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದ ಪೊನ್ನಂಪೇಟೆ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಿರೀಶನನ್ನು ಬಂಧಿಸಿದ್ದರು. ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಮಹತ್ವದ ಪ್ರಕರಣದಲ್ಲಿ ಹಿರಿಯ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎಲ್ಲಾ ಸಾಕ್ಷಿ ಮತ್ತು ವಾದ-ಪ್ರತಿವಾದ ಪರಿಶೀಲಿಸಿದ ಬಳಿಕ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕೊಡಗಿನ ಇತಿಹಾಸದಲ್ಲಿ ಹಿಂದೆAದೂ ಗಲ್ಲು ಶಿಕ್ಷೆ ವಿಧಿಸಿದ ಇತಿಹಾಸವಲ್ಲಿ. ಇದೇ ಮೊದಲ ಬಾರಿಗೆ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ವಿಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















