No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Tuesday, March 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಅಪರೂಪದ ಯಶಸ್ಸು | ತಾಯಿ, ಮಗು ಬದುಕಿದ್ದೇ ಪವಾಡ

ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2025
in ಶಿವಮೊಗ್ಗ
0
ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಅಪರೂಪದ ಯಶಸ್ಸು | ತಾಯಿ, ಮಗು ಬದುಕಿದ್ದೇ ಪವಾಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಿಲ್ಲೆಯ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವೈದ್ಯರ ಕಾಳಜಿ ಹಾಗೂ ಶ್ರಮದ ಫಲವಾಗಿ ತಾಯಿ-ಮಗುವಿನ ಜೀವ ಉಳಿದಿದ್ದು, ಇಬ್ಬರೂ ಬದುಕುಳಿದಿದ್ದೇ ಒಂದು ಪವಾಡವಾಗಿದೆ. ಈ ಘಟನೆ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ #SahyadriNarayanaHospital ಅಪರೂಪದ ಯಶಸ್ಸಾಗಿದ್ದು, ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಹೊಸ ಭರವಸೆಯನ್ನುಹುಟ್ಟು ಹಾಕಿದೆ.

ಏನಿದು ಪ್ರಕರಣ?
25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು. ತಮ್ಮ ಮೊದಲ ಮಗು ಬರಲಿರುವ ಖುಷಿಯಲ್ಲಿದ್ದಾಗ, ಅವರ ಜೀವನದಲ್ಲಿ ದೊಡ್ಡ ಸಂಕಷ್ಟ ಎದುರಾಯಿತು. ಗರ್ಭಿಣಿಯಾಗಿ ಎಲ್ಲವೂ ಸರಿಯಾಗಿದ್ದರೂ, ಅವರ ರಕ್ತದೊತ್ತಡ ಮಾತ್ರ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಏಳನೇ ತಿಂಗಳಿಗೆ ಕಾಲಿಟ್ಟಾಗ, ಅವರಿಗೆ ದಿಢೀರನೇ ಕಣ್ಣು ಕಾಣಿಸದಂತಾಯಿತು. ಪರಿಸ್ಥಿತಿ ತೀವ್ರ ಹದಗೆಡುತ್ತಿದ್ದರಿಂದ, ತಮ್ಮ ಹಳ್ಳಿಯ ಆಸ್ಪತ್ರೆಯಿಂದ ಅನೇಕ ಖಾಸಗಿ ಆಸ್ಪತ್ರೆಗಳಿಗೆ ಹೋಗಿ, ಕೊನೆಗೆ ಸುಧಾರಿತ ಚಿಕಿತ್ಸೆಗಾಗಿ ಅವರನ್ನು ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆತರಲಾಯಿತು.

ಆಸ್ಪತ್ರೆಗೆ #Hospital ಬಂದಾಗ ರೋಗಿಯ ಸ್ಥಿತಿ ಗಂಭೀರವಾಗಿತ್ತು. ತೀವ್ರವಾದ ಅಧಿಕ ರಕ್ತದೊತ್ತಡದಿಂದಾಗಿ ‘ಎಕ್ಲಾಂಪ್ಸಿಯಾ’ (ಭಾರೀ ಮೂರ್ಛೆ ಬರುವ ಸ್ಥಿತಿ) ಅಪಾಯದಲ್ಲಿದ್ದರು. ತಕ್ಷಣವೇ ತುರ್ತು ಚಿಕಿತ್ಸೆ ಆರಂಭಿಸಿದ ತಂಡ, ಹೈ-ರಿಸ್ಕ್ ಗರ್ಭಾವಸ್ಥೆಗಳನ್ನು ನಿಭಾಯಿಸುವುದರಲ್ಲಿ ಹೆಸರುವಾಸಿಯಾದ ಹಿರಿಯ ಸ್ತ್ರೀರೋಗ ತಜ್ಞ ಡಾ. ರಾಘವೇಂದ್ರ ಭಟ್ ಅವರನ್ನು ತುರ್ತಾಗಿ ಕರೆಸಲಾಯಿತು. ತಕ್ಷಣವೇ ಅಗತ್ಯ ಪರೀಕ್ಷೆಗಳನ್ನು ನಡೆಸಲಾಯಿತು.

ಪರೀಕ್ಷೆಗಳಿಂದ ಗೊತ್ತಾದ ವಿಷಯ ಏನು ಅಂದರೆ, ಅವರಿಗೆ ತೀವ್ರವಾದ ‘ಪ್ರೀ-ಎಕ್ಲಾಂಪ್ಸಿಯಾ’ #Eclampsia ಇತ್ತು ಮತ್ತು ದೃಷ್ಟಿ ಕಳೆದುಕೊಳ್ಳಲು ಕಾರಣವಾಗಿದ್ದ ‘ರೆಟಿನಾ ಡಿಟ್ಯಾಚ್‌ಮೆಂಟ್’ (ಕಣ್ಣಿನ ಪರದೆಯ ಬೇರ್ಪಡಿಕೆ) ಸಮಸ್ಯೆ ಇತ್ತು. ಕೂಡಲೇ ನಿರ್ಧಾರ ತೆಗೆದುಕೊಂಡ ಡಾ. ಭಟ್ ಅವರ ತಂಡ, ತಾಯಿಯ ಜೀವ ಉಳಿಸಲು ತುರ್ತಾಗಿ ಶಸ್ತ್ರಚಿಕಿತ್ಸೆ (ಸಿಸೇರಿಯನ್) ಮಾಡಿ ಮಗುವನ್ನು ಹೊರತೆಗೆಯಲು ತೀರ್ಮಾನಿಸಿತು. ಅಂದು ರಾತ್ರಿ, ಕೇವಲ 1 ಕೆ.ಜಿ ತೂಕದ ಅವಧಿಪೂರ್ವ #Premature ಶಿಶುವಿಗೆ ಆ ತಾಯಿ ಜನ್ಮ ನೀಡಿದರು.
ಡಾ. ಭಟ್ ಅವರ ಪ್ರಕಾರ, ತಾಯಿ ಮತ್ತು ಮಗು ಇಬ್ಬರೂ ಐಸಿಯುನಲ್ಲಿ #ICU ತೀವ್ರ ಆರೋಗ್ಯ ಸವಾಲುಗಳನ್ನು ಎದುರಿಸಿದರು. ತಾಯಿಗೆ ನಂತರ ಮೆದುಳಿನ ತೊಂದರೆಯಾದ ‘ಎನ್ಸೆಫಲೋಪತಿ’ ಕಾಣಿಸಿಕೊಂಡಾಗ, ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಯ ನರರೋಗ ತಜ್ಞರಾದ ಡಾ. ರೂಪಾ ಅವರು ಅದನ್ನೂ ಯಶಸ್ವಿಯಾಗಿ ಸರಿಪಡಿಸಿದರು. ಐಸಿಯುನಲ್ಲಿ ನಾಲ್ಕು ದಿನ ಇದ್ದ ನಂತರ, ತಾಯಿಯನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಮೂರು ದಿನಗಳಲ್ಲಿ ಆಕೆಯ ದೃಷ್ಟಿ ಸುಧಾರಿಸಿ ಅವರು ಮನೆಗೆ ಹೋದರು.

ಅವಧಿ ಪೂರ್ವ ಜನಿಸಿದ ಮಗುವನ್ನು ಶಿಶು ರೋಗ ತಜ್ಞ ಡಾ. ಶಶಿಧರ್ ಹೆಗ್ಡೆ ಅವರ ಮೇಲ್ವಿಚಾರಣೆಯಲ್ಲಿ ಎನ್ಐಸಿಯುನಲ್ಲಿ #NICU ಇಡಲಾಯಿತು. ಡಾ. ಶಶಿಧರ್ ಹೇಳಿದಂತೆ, ಮಗುವಿನ ಬಹುತೇಕ ಅಂಗಗಳು ಪೂರ್ಣವಾಗಿ ಬೆಳೆದಿಲ್ಲದ ಕಾರಣ, ಅದನ್ನು ಸುಮಾರು 45 ದಿನಗಳ ಕಾಲ ತೀವ್ರ ನಿಗಾದಲ್ಲಿ ಇಡಬೇಕಾಯಿತು. ಹೃದಯ ಬಡಿತ ಕಡಿಮೆ ಇತ್ತು, ಉಸಿರಾಡಲು ಕಷ್ಟವಿತ್ತು. ಹಾಗಾಗಿ, ಮಗುವನ್ನು ನಿರಂತರ ಆಮ್ಲಜನಕ ಬೆಂಬಲದೊಂದಿಗೆ ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಒಮ್ಮೆ ಹೃದಯ ಬಡಿತ ನಿಂತಾಗ ಸಿಪಿಆರ್ #CPR ನೀಡಿ ಮತ್ತೆ ಚೇತರಿಸಲಾಯಿತು.

ಇದಲ್ಲದೆ, ಮಗುವಿನ ಹೃದಯದಲ್ಲಿ ರಂಧ್ರವಿತ್ತು. ಅದನ್ನು ಔಷಧಿಗಳ ಮೂಲಕವೇ ಸರಿಪಡಿಸಲಾಯಿತು. ರಕ್ತದ ಮಟ್ಟ ಕಡಿಮೆಯಾಗಿದ್ದರಿಂದ ರಕ್ತವನ್ನೂ ನೀಡಲಾಯಿತು. ಅತಿ ಕಡಿಮೆ ತೂಕದ ಮಗುವಾಗಿದ್ದರಿಂದ, ಕೆಲವೊಮ್ಮೆ ಮೆದುಳಿನ ಅಪಕ್ವತೆಯಿಂದ ಉಸಿರಾಟ ನಿಲ್ಲಿಸುವ ತೊಂದರೆಯೂ ಇತ್ತು. “ನಮ್ಮ ನರ್ಸಿಂಗ್ ಸಿಬ್ಬಂದಿ ದಣಿವರಿಯದೆ ಕೆಲಸ ಮಾಡಿದರು. ತಮ್ಮ ಊಟ-ತಿಂಡಿಯನ್ನೂ ಲೆಕ್ಕಿಸದೆ ಮಗುವನ್ನು ನೋಡಿಕೊಂಡರು. ಮಗುವಿಗೆ ಮೊದಲು ಟ್ಯೂಬ್ ಮೂಲಕ ಆಹಾರ ನೀಡಿ, ನಂತರ ತಾಯಿಯಿಂದ ಹಾಲುಣಿಸಲು ತರಬೇತಿ ನೀಡಲಾಯಿತು. ಆ ಸಿಬ್ಬಂದಿಯ ಕಾಳಜಿಯಿಂದ, ಮಗುವು ಸ್ಥಿರವಾಗಿ, ಆಟವಾಡುತ್ತಾ, ಸುಮಾರು 1.8 ಕೆಜಿ ತೂಕದೊಂದಿಗೆ ಒಂದೂವರೆ ತಿಂಗಳ ನಂತರ ಆಸ್ಪತ್ರೆಯಿಂದ ಮನೆಗೆ ಮಗು ತೆರಳಿದೆ,” ಎಂದು ಡಾ. ಶಶಿಧರ್ ಸಂತೋಷ ಹಂಚಿಕೊಂಡರು.
ಇಂತಹ ಪ್ರಕರಣ ಅಪರೂಪ ಎಂದು ಹೇಳಿದ ಡಾ. ಭಟ್, ತಮ್ಮ ವೃತ್ತಿಯಲ್ಲಿ ಪ್ರೀ-ಎಕ್ಲಾಂಪ್ಸಿಯಾದಿಂದಾಗಿ ಗರ್ಭಿಣಿಯೊಬ್ಬರು ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದನ್ನು ಕಂಡಿದ್ದು ಇದೇ ಮೊದಲು ಎಂದರು.

“ಇಂತಹ ಕಠಿಣ ಸಮಸ್ಯೆಗಳ ಬಗ್ಗೆ ನಾವು ಪುಸ್ತಕಗಳಲ್ಲಿ ಓದುತ್ತೇವೆ, ಆದರೆ ನಿಜವಾಗಿಯೂ ಹೀಗಾಗುವುದು ಬಹಳ ವಿರಳ. ಇದು ಕೈ ಮೀರಿ ಹೋಗುವ ಸನ್ನಿವೇಶವಾಗಿತ್ತು, ಅದನ್ನು ನಾವು ಗೆಲುವಾಗಿ ಪರಿವರ್ತಿಸಿದ್ದೇವೆ,” ಎಂದು ಅವರು ಹೇಳಿದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗೀಸ್ ಪಿ. ಜಾನ್ ಅವರು ವೈದ್ಯರಾದ ಡಾ. ರಾಘವೇಂದ್ರ ಭಟ್, ಡಾ. ಶಶಿಧರ್ ಹೆಗ್ಡೆ, ಡಾ. ರೂಪಾ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸಿದ್ದಾರೆ. ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು ಸವಾಲಿನ ಗರ್ಭಾವಸ್ಥೆಗಳನ್ನು ನಿಭಾಯಿಸುವಲ್ಲಿ ಮುಂದಿದೆ ಮತ್ತು ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ನಾವು ಬದ್ಧವಾಗಿದ್ದೇವೆ ಎಂದು ಪುನರುಚ್ಚರಿಸಿದರು.

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್‌ ಎಸ್‌ ಎನ್‌, ಹಾಗೂ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: 'Eclampsia''ಎಕ್ಲಾಂಪ್ಸಿಯಾ'BENGALURUHealth NewsHealth UpdatesthospitalKannada News WebsiteLatest News KannadaLocal NewsMalnad NewsPrematureRetinal detachmentSahyadri Narayana Hospitalಬೆಂಗಳೂರುರೆಟಿನಾ ಡಿಟ್ಯಾಚ್‌ಮೆಂಟ್ಸಹ್ಯಾದ್ರಿ ನಾರಾಯಣ ಆಸ್ಪತ್ರೆ
Share196Tweet123Send
Previous Post

ಶಿವಮೊಗ್ಗ | ಡೆವಿಲ್ ಸಂಭ್ರಮಾಚರಣೆಯಿಂದ ಮರಳುವ ವೇಳೆ ಅಪಘಾತ | ಯುವಕ ಸಾವು

Next Post

ಭದ್ರಾವತಿಯ 23 ವರ್ಷದ ಯುವಕನಿಗೆ 30 ವರ್ಷ ಜೈಲು ಶಿಕ್ಷೆ | ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಭದ್ರಾವತಿಯ 23 ವರ್ಷದ ಯುವಕನಿಗೆ 30 ವರ್ಷ ಜೈಲು ಶಿಕ್ಷೆ | ಕಾರಣವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತಾಯಿಯ ಕೈಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವು

ಘೋರ ಘಟನೆ | ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ದಾರುಣ ಸಾವು

March 31, 2026
ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

March 31, 2026
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

March 31, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಸಾಂಸ್ಕೃತಿಕ ವೈಭವ, ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸಿ: ಶಾಸಕ ಚನ್ನಬಸಪ್ಪ

March 31, 2026
ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

March 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL