No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಏಕಕಾಲದಲ್ಲಿ ಲೋಕಾಯುಕ್ತ ದಾಳಿ | ಧಾರವಾಡ, ಶಿವಮೊಗ್ಗ, ವಿಜಯನಗರದ ವಿವಿಧೆಡೆ ತಪಾಸಣೆ

kalpa News by kalpa News
December 16, 2025
in ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ
0
Lokayukta Raid
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಧಾರವಾಡ/ಶಿವಮೊಗ್ಗ/ವಿಜಯನಗರ  |

ಲೋಕಾಯುಕ್ತ ಪೊಲೀಸರು #Lokayuktha Police ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಧಾರವಾಡ, ಶಿವಮೊಗ್ಗ ಹಾಗೂ ವಿಜಯನಗರ ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ನಡೆಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಬಿಜಾಪೂರ ಅವರಿಗೆ ಸೇರಿದ್ದು ಎನ್ನಲಾದ ನಗರದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ಮನೆ ಮೇಲೆ ಇಂದು ದಾಳಿ ಮಾಡಿರುವ ಲೋಕಾ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ಕೃಷಿ ಇಲಾಖೆ ವಿಜಿಲೆನ್ಸ್ ವಿಭಾಗದ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್​ ಅವರು, ಈ ಮುಂಚೆ ಧಾರವಾಡದಲ್ಲಿ ಸಹ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಧಾರವಾಡದಲ್ಲಿ ಮೂರು ಕಡೆ ದಾಳಿ ಮಾಡಿದ್ದು, ರಾಣಿ ಚೆನ್ನಮ್ಮ ನಗರದಲ್ಲಿರುವ ಅವರ ಖಾಸಗಿ ಕಚೇರಿ, ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆಯೂ ದಾಳಿ ಮಾಡಿದ್ದಾರೆ. ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ್ದು, ಒಟ್ಟು ಆರು ಲೋಕಾ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗದಲ್ಲೂ ಲೋಕಾ ದಳಿ:

ಶಿವಮೊಗ್ಗ ಜಿಲ್ಲಾ ಪಂಚಾಯತ್ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್ ಅವರ ಶಿವಮೊಗ್ಗದ ಕಚೇರಿ, ಬೆಂಗಳೂರಿನ ಮನೆಗಳು ಸೇರಿದಂತೆ ಒಟ್ಟು ಐದು ಕಡೆ ಲೋಕಾಯುಕ್ತ ಎಸ್ಪಿ ಮಂಜುನಾಥದ ಚೌಧರಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್​ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರೂಪ್ಲಾ ನಾಯ್ಕ್ ಹಾಗೂ ಸಹಾಯಕ ಎಂಜಿನಿಯರ್ ಶ್ಯಾಮ್ ಅವರ ಮನೆಗಳ‌ ಮೇಲೆ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಲಾಗಿದೆ‌. ರೂಪ್ಲಾ ನಾಯ್ಕ್ ಅವರ ಶಿವಮೊಗ್ಗದ ಬಸವನಗುಡಿಯ ಮನೆ, ಡಿಸಿ ಕಾಂಪೌಂಡ್​ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯ ಪಟ್ಟಣ ಹೋಬಳಿಯ ಹಳ್ಳಿಹಟ್ಟಿ ತಾಂಡದ‌ ಮನೆ, ಬೆಂಗಳೂರಿನ ಕುಂಬಳಗೂಡಿನ ಪನೂರಮನ ಆರ್ ಆರ್ ಡೆಂಟಲ್ ಕಾಲೇಜು ಬಳಿಯ ಪನೂರಮ ಅಪಾರ್ಟ್​ಮೆಂಟ್, ಹಾಗೂ ಸ್ಯಾಟಲೈಟ್ ಏರಿಯಾದ ಮನೆ ಸೇರಿ ಬೆಂಗಳೂರಿನಲ್ಲಿ ಎರಡು ಕಡೆ ದಾಳಿ ನಡೆಸಲಾಗಿದೆ.

ಇನ್ನು ಸಹಾಯಕ ಇಂಜಿನಿಯರ್ ಶ್ಯಾಮ್ ಅವರ ಶಿವಮೊಗ್ಗದ ವಿದ್ಯಾನಗರದ ಮನೆ‌ ಮೇಲೆ ದಾಳಿ ನಡೆಸಲಾಗಿದೆ.

ಒಟ್ಟು ಆರು ಕಡೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ರೂಪ್ಲಾ ನಾಯ್ಕ್ ಅವರು ಬೆಂಗಳೂರಿನ ಮನೆಯಲ್ಲಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿ ಎರಡು ಕಡೆ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ಅವರು ದಾಳಿ ನಡೆಸಿದ್ದಾರೆ.

ವಿಜಯನಗರ ಆರೋಗ್ಯಾಧಿಕಾರಿ ಶಂಕರ್ ನಾಯ್ಕ ಅವರಿಗೆ ಸೇರಿದ್ದು ಎನ್ನಲಾದ ಮನೆ ಮೇಲೆಯೂ ಲೋಕಾ ದಾಳಿ ನಡೆದಿದೆ. ಮನೆ ಹಾಗೂ ಕಚೇರಿ ಆಸ್ಪತ್ರೆ ಮೇಲೆ ದಾಳಿ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Dharawada/Shivamogga/VijayanagaraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsLokayuktha PoliceMalnadNewsNews in KannadaNews KannadaShimogaShivamoggaNewsಧಾರವಾಡ/ಶಿವಮೊಗ್ಗ/ವಿಜಯನಗರಮಲೆನಾಡು_ಸುದ್ಧಿಲೋಕಾಯುಕ್ತ ಪೊಲೀಸ್ಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಕಾರಣಕ್ಕೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿರಲಿಲ್ಲ: ಮೌನ ಮುರಿದ ವಿಜಯಲಕ್ಷ್ಮಿ

Next Post

ಗಮನಿಸಿ! ಡಿ.17ರಂದು ಆಯನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.17ರಂದು ಆಯನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL