ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ತೀವ್ರ ಹೃದಯಾಘಾತದಿಂದಾಗಿ ತೀರ್ಥಹಳ್ಳಿ ಮೂಲದ 22 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿರುವ #Student death by Heartattack ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ದಿಶಾ(22) ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು.
ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್’ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.
ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಅಕಾಲಿಕ ಸಾವಿನ ಸುದ್ದಿ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಕುಟುಂಬದವರಲ್ಲಿ ತೀವ್ರ ದುಃಖ ಮತ್ತು ಆಘಾತವನ್ನುಂಟುಮಾಡಿದೆ.
ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















