ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಿಲಿಕಾನ್ ಸಿಟಿಯಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ #Shilpa Shetty ಒಡೆತನದ ಐಷಾರಾಮಿ ಪಬ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಚರ್ಚ್ ಸ್ಟ್ರೀಟ್’ನಲ್ಲಿರುವ ಜನಪ್ರಿಯ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ ನಡೆದಿದೆ. ಮಾತ್ರವಲ್ಲ ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ.
ಈ ದಾಳಿಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಈ ಐಟಿ ದಾಳಿಯು ಆ ಹಿಂದಿನ ಪ್ರಕರಣಗಳ ಮುಂದುವರಿದ ಭಾಗವೇ ಅಥವಾ ಪಬ್’ಗೆ ಸಂಬಂಧಿಸಿದ ಇತರ ವಿವಾದಗಳಿಗೆ ಸಂಬಂಧಿಸಿದ್ದೇ ಎಂಬ ಪ್ರಶ್ನೆಗಳು ಮೂಡಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















