ಕಲ್ಪ ಮೀಡಿಯಾ ಹೌಸ್ | ಹಾಸನ |
ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 75ರ ಹೆಗ್ಗದೆ ಬಳಿ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರು ಕಡೆಗೆ ಅತಿ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ತನ್ನ ಮುಂದೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಜೋರಾಗಿ ಗುದ್ದಿದೆ. ಬಸ್ಸಿನ ಮುಂಭಾಗವು ಸಂಪೂರ್ಣವಾಗಿ ಜಖಂಗೊಂಡಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯಲ್ಲಿ ಬಸ್ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಚಾಲಕ ಸೇರಿದಂತೆ ಒಟ್ಟು 40 ಪ್ರಯಾಣಿಕರಿದ್ದರು ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















