No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಡಿ.27 | ಹುಬ್ಬಳ್ಳಿಯಲ್ಲಿ ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ

kalpa News by kalpa News
December 20, 2025
in ಹುಬ್ಬಳ್ಳಿ-ಧಾರವಾಡ
0
ಡಿ.27 | ಹುಬ್ಬಳ್ಳಿಯಲ್ಲಿ ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಯೇಸ್ಸಾರ್ ಪ್ರಶಸ್ತಿ ಪುರಸ್ಕೃತ ಸುರೇಂದ್ರ ದಾನಿ #Surendra Dani ಜನ್ಮಶತಮಾನೋತ್ಸವ ಕಾರ್ಯಕ್ರಮ ಡಿ.27ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 9.30ಕ್ಕೆ ಧಾರವಾಡದ ಗೀತಾ ಆಲೂರು, ಬೆಂಗಳೂರಿನ ಸುಜ್ಞಾನ ದಾನಿ ಮತ್ತು ಸಂಗಡಿಗರು ಲಘು ಸಂಗೀತ ಪ್ರಸ್ತುತ ಪಡಿಸಲಿದ್ದಾರೆ.

ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಸಮಿತಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಲಿದ್ದಾರೆ.
ಹುಬ್ಬಳ್ಳಿಯ ಅದ್ವೈತ ವಿದ್ಯಾಶ್ರಮದ ಶ್ರೀ ಪ್ರಣವಾನಂದ ತೀರ್ಥರು ಸಾನಿಧ್ಯ ವಹಿಸಲಿರುವ ಕಾರ್ಯಕ್ರಮ ಅಧ್ಯಕ್ಷತೆಯನ್ನು ಖ್ಯಾತ ವೈದ್ಯ ಡಾ. ಎಂ ಎಂ ಜೋಶಿ ವಹಿಸಲಿದ್ದಾರೆ.

ಸುರೇಂದ್ರ ದಾನಿ ಕುರಿತ ಸ್ಮರಣೆ ಸಂಚಿಕೆ ಬಿಡುಗಡೆ ಆಗಲಿದ್ದು, ಸಚಿವ ಎಚ್. ಕೆ. ಪಾಟೀಲ್, ಸಂಸದ ಜಗದೀಶ್ ಶೆಟ್ಟರ್, ಮಾಜಿ ಸಂಸದ ಐ.ಜಿ. ಸನದಿ, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾAತ ಬೆಲ್ಲದ, ಉದ್ಯಮಿಗಳಾದ ಕೇಶವರಾಯ ದೇಸಾಯಿ, ಗೋವಿಂದ ಜೋಶಿ, ಹಿರಿಯ ಪತ್ರಕರ್ತ ಬಾಬು ಕೃಷ್ಣಮೂರ್ತಿ, ನಾರಾಯಣ ಢಗಳಘಿ, ಪತ್ರಿಕೋದ್ಯಮ ಉಪನ್ಯಾಸಕ ಡಾ. ಜೆ.ಎಂ. ಚಂದುನವರ ಉಪಸ್ಥಿತರಿರಲಿದ್ದಾರೆ.

ಎರಡು ಪ್ರತ್ಯೇಕ ಗೋಷ್ಠಿಗಳು ನಡೆಯಲಿದ್ದು, ಶ್ರೀನಿವಾಸ ವಾಡಪ್ಪಿ, ಭಾರತಿ ಜೋಶಿ, ಶ್ರೀಕೃಷ್ಣ ಸಂಪಗಾAವರ್ಕ ಮತ್ತು ಎನ್.ಎಸ್. ನಾಡಿಗೇರ ವಿಷಯ ಮಂಡಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ಮನೋಜ ಪಾಟೀಲ್, ಅರುಣಕುಮಾರ ಹಬ್ಬು, ವಿಶ್ವನಾಥ್ ಕುಲಕರ್ಣಿ, ಮೋಹನ್ ಹೆಗಡೆ, ಬಂಡು ಕುಲಕರ್ಣಿ, ಮಲ್ಲಿಕಾರ್ಜುನ ಸಿದ್ದಣ್ಣವರ್, ಪ್ರಕಾಶ್ ಶೇಟ್ ಮತ್ತು ಹಿರಿಯ ನ್ಯಾಯವಾದಿ ಸುಧೀಂದ್ರ ದೇಶಪಾಂಡೆ ಭಾಗವಹಿಸಲಿದ್ದಾರೆ.
ಸುರೇಂದ್ರ ದಾನಿ ವೃತ್ತಿ ಜೀವನ:

ಸುರೇಂದ್ರ ದಾನಿ ಪತ್ರಿಕಾಲೋಕದಲ್ಲಿ ಅಂದಿನ ಕಾಲದ ಪ್ರಸಿದ್ಧ ಹೆಸರು. ಇಂದಿನ ಕನ್ನಡ ಪತ್ರಿಕೋದ್ಯಮದ ಹಲವಾರು ಹಿರಿಯ ಪತ್ರಕರ್ತರು ಮತ್ತು ಅಗ್ರ ಲೇಖಕರು ದಾನಿಯವರ ಶಿಷ್ಯರು ಎಂದು ಅಭಿಮಾನದಿಂದ ಹೇಳುತ್ತಾರೆ.

ಸುರೇಂದ್ರ ದಾನಿ 1925ರ ಆಗಸ್ಟ್ 17ರಂದು ಧಾರವಾಡದಲ್ಲಿ ಜನಿಸಿದರು. ತಂದೆ ಭೀಮರಾವ್. ತಾಯಿ ಗಂಗಾಬಾಯಿ. ಸುರೇಂದ್ರ ದಾನಿ ಅವರ ಪ್ರಾರಂಭಿಕ ಶಿಕ್ಷಣ ಧಾರವಾಡ, ಬಾಗಲಕೋಟೆ, ಬಿಜಾಪುರಗಳಲ್ಲಿ ನೆರವೇರಿತು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಅರ್ಥಶಾಸ್ತ್ರದಲ್ಲಿ ಬಿ.ಎ. ಪದವಿ ಪಡೆದರು.

ಸುರೇಂದ್ರ ದಾನಿ ಅವರಿಗೆ ಬ್ರಿಟಿಷರ ಗುಲಾಮಗಿರಿಯೊಳಗೆ ನೌಕರಿ ಮಾಡಬಾರದೆಂಬ ಹಠವಿತ್ತು. ಅನಿರೀಕ್ಷಿತವಾಗಿ ಮೊಹರೆ ಹನುಮಂತ ರಾಯರು ಕರೆದುಕೊಟ್ಟ ಉದ್ಯೋಗದಿಂದ ಪತ್ರಿಕೋದ್ಯಮ ಸೇರಿದರು. ಇದಕ್ಕೆಲ್ಲಾ ಗಾಂಧೀಜಿಯವರ ‘ಹರಿಜನ’ ಪತ್ರಿಕೆಯ ಪ್ರೇರಣೆಯೂ ಇತ್ತು.

ಸುರೇಂದ್ರ ದಾನಿ ಅವರು 1947ರಲ್ಲಿ ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ವರದಿಗಾರರಾಗಿ ನೇಮಕಗೊಂಡರು. ನಂತರ ಉಪಸಂಪಾದಕರ ಹುದ್ದೆಗೆ ಏರಿದರು. ಬೆಂಗಳೂರಿನಲ್ಲಿ ಸಂಯುಕ್ತ ಕರ್ನಾಟಕ ಆವೃತ್ತಿ ಪ್ರಾರಂಭವಾದಾಗ ವರ್ಗವಾಯ್ತು. ಅಲ್ಲಿ ಸಂಪಾದಕೀಯ ಲೇಖಕರೂ, ಸಾಪ್ತಾಹಿಕ ವಿಭಾಗದ ಸಂಪಾದಕರೂ ಆದರು. ಮತ್ತೆ ಹುಬ್ಬಳ್ಳಿಯಲ್ಲಿ ಸ್ಥಾನಿಕ ಸಂಪಾದಕರ ಹುದ್ದೆಗೆ ಹಿಂದಿರುಗಿದರು. ಹುಬ್ಬಳ್ಳಿ-ಬೆಂಗಳೂರು ಎರಡೂ ಮುದ್ರಣಗಳ ಸಂಪಾದಕರಾಗಿ ಹೊಣೆ ಹೊತ್ತರು. 1983ರಲ್ಲಿ ನಿವೃತ್ತರಾದರು.

https://kalpa.news/wp-content/uploads/2024/04/VID-20240426-WA0008.mp4

ಸುರೇಂದ್ರ ದಾನಿ ನಿವೃತ್ತಿಯ ನಂತರವೂ ಒಂದೆಡೆ ಸುಮ್ಮನೆ ಕೂಡದ ಜೀವ. ಗುಲ್ಬರ್ಗಾದಿಂದ ಪ್ರಕಟವಾಗುತ್ತಿದ್ದ ‘ಕೇಸರಿಗರ್ಜನೆ’ ದಿನಪತ್ರಿಕೆಯ ಸಂಪಾದಕರಾಗಿ, ಹುಬ್ಬಳ್ಳಿಯ ‘ಖಾದಿಜಗತ್ತು’ ಪತ್ರಿಕೆಯ ಸಂಪಾದಕರಾಗಿ, ‘ಪರಿವಾರ’ ದ್ವೈಮಾಸಿಕ ಪತ್ರಿಕೆಯ ಸಂಪಾದಕರಾಗಿ, ‘ಸುರಾಜ್ಯಪಥ’ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿ ಹೀಗೆ, ನಿರಂತರವಾಗಿ ಒಂದಿಲ್ಲೊಂದು ಜವಾಬ್ದಾರಿ ಹೊತ್ತು ನಡೆಯುತ್ತಿದ್ದರು. ಪತ್ರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಸ್ಮರಣ ಸಂಚಿಕೆಗಳ ಸಂಪಾದಕತ್ವವನ್ನೂ ಅವರು ನಿರ್ವಹಿಸಿದ್ದರು.

ಸುರೇಂದ್ರ ದಾನಿ ಅವರು ‘ಪತ್ರಕರ್ತನ’ ಜವಾಬ್ದಾರಿಗಳ ನಡುವೆಯೂ ಸಾಹಿತ್ಯ ಕೃತಿಗಳ ರಚನೆಗಳಲ್ಲಿ ತೊಡಗಿದ್ದರು. ಕೌಜಲಗಿ ಹನುಮಂತ ರಾಯರು, ಮೊಹರೆ ಹನುಮಂತರಾಯರು, ಅಮೆರಿಕದ ಪುಲಿಟ್ಜರ್ ಪಾರಿತೋಷಕ ಸ್ಥಾಪಕ ಜೋಸೆಫ್ ಪುಲಿಟ್ಜರ್ ಕುರಿತು ಕನ್ನಡಾನುವಾದದ ಕೃತಿ ಸೇರಿದಂತೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಜೀವನ ಚರಿತ್ರೆಗಳು, ಪತ್ರಿಕಾ ಪ್ರಬಂಧಗಳು ಎಂಬುದು ಇವರ ಪ್ರಬಂಧ ಸಂಗ್ರಹ. ಸ್ವಯಂ ಸೇವಕರ ನೆನಪುಗಳು, ಸ್ವಾತಂತ್ರ್ಯಸೇನಾನಿ, ಸಾಧನೆ-ಸವಾಲು, ಧಾರವಾಡ ಜಿಲ್ಲಾ ಸ್ವಾತಂತ್ರ್ಯ ಸಂಗ್ರಾಮ, ವ್ಯಾಸಸೃಷ್ಟಿ – ಕುಮಾರವ್ಯಾಸ ದೃಷ್ಟಿ ಮುಂತಾದವು ಅವರ ಇನ್ನಿತರ ವೈವಿಧ್ಯಮಯ ಬರಹಗಳಲ್ಲಿ ಕೆಲವು.

ಸುರೇಂದ್ರ ದಾನಿ ಅವರು ಮೊಹರೆ ಹನುಮಂತರಾವ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ, ಹುಬ್ಬಳ್ಳಿಯ ಕುಮಾರವ್ಯಾಸ ಸೇವಾ ಸಂಘದ ಗೌರವ ಕಾರ‍್ಯದರ್ಶಿ, ಗಾಂಧೀ ವಿಚಾರವೇದಿಕೆ ಸ್ಥಾಪಕ ಅಧ್ಯಕ್ಷ, ಗಮಕ ಸಂಗೀತೋತ್ಸವಗಳ ರೂವಾರಿ ಕೂಡ. ಹೀಗೆ ಹಲವು ರೀತಿಯಲ್ಲಿ ಸದಾ ಕ್ರಿಯಾಶೀಲರಾಗಿದ್ದರು. ಕುಮಾರವ್ಯಾಸ ಕೃತಿಯ ಬಗ್ಗೆ ಅವರಿಗೆ ವಿಶೇಷ ಆಸಕ್ತಿ ಇದ್ದು, ಭಾರತ ವಾಚನ ವ್ಯಾಖ್ಯಾನ ನಿಪುಣರಾಗಿದ್ದರು.

ಸುರೇಂದ್ರ ದಾನಿ ಅವರಿಗೆ ಕರ್ನಾಟಕ ಪತ್ರಿಕಾ ಅಕಾಡಮಿ ಪ್ರಶಸ್ತಿ, ಖಾದ್ರಿ ಶಾಮಣ್ಣ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎಚ್.ಆರ್. ಕುಲಕರ್ಣಿ ಸ್ಮಾರಕ ಪತ್ರಿಕಾ ಪ್ರಶಸ್ತಿ, ಜಗನ್ನಾಥರಾವ್ ಟಂಕಸಾಲಿ ಸ್ಮಾರಕ ಪತ್ರಿಕಾ ಪ್ರಶಸ್ತಿ, ಕರ್ನಾಟಕ ಗಮಕ ಕಲಾಪರಿಷತ್ತಿನ ಗಮಕ ವ್ಯಾಖ್ಯಾನ ಪ್ರಶಸ್ತಿ, ಟಿಎಸ್ಸಾರ್ ಪತ್ರಿಕಾ ಪ್ರಶಸ್ತಿಗಳೂ ಸೇರಿ ಅನೇಕ ಗೌರವಗಳು ಸಂದಿದ್ದವು.
ಸುರೇಂದ್ರ ದಾನಿ ಅವರು 2010ರ ಮಾರ್ಚ್ 28ರಂದು ವೈಕುಂಠವಾಸಿಗಳಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSurendra Daniಸುರೇಂದ್ರ ದಾನಿಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು, ಮೈಸೂರು-ತಾಳಗುಪ್ಪ, ಕೆಎಸ್’ಆರ್-ಕಾರವಾರ ಸೇರಿ ಹಲವು ರೈಲುಗಳ ಕುರಿತು ಬಿಗ್ ಅಪ್ಡೇಟ್

Next Post

ಅಜ್ಮೀರ್-ಬೆಂಗಳೂರು ನಡುವಿನ ವಿಶೇಷ ರೈಲುಗಳು | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
SWR to Run Special Train Services Between Bengaluru, Belagavi and Mysuru

ಅಜ್ಮೀರ್-ಬೆಂಗಳೂರು ನಡುವಿನ ವಿಶೇಷ ರೈಲುಗಳು | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL