ಕಲ್ಪ ಮೀಡಿಯಾ ಹೌಸ್ | ಮೈಸೂರು |
ಹಾಡಹಗಲೇ ಸುಮಾರು 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು #Jewellery showroom robbery ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.
ಪಟ್ಟಣದ ಬಸ್ ನಿಲ್ದಾಣದ ಬಳಿಯಿರುವ ಆಭರಣ ಶೋ ರೂಂಗೆ ಬಂದೂಕುಗಳೊಂದಿಗೆ ಬಂದ ಐದು ಜನರ ತಂಡವು ಸುಮಾರು 5 ಕೆಜಿ ತೂಕದ ಚಿನ್ನಾಭರಣಗಳನ್ನು ದೋಚಿದೆ.
ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಲಾಗಿದ್ದು, ಇಡೀ ಘಟನೆಯು ಶೋ ರೂಂನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಹುಣಸೂರು ಬಸ್ ನಿಲ್ದಾಣದ ಬಳಿಯ ಜನನಿಬಿಡ ವಾಣಿಜ್ಯ ಪ್ರದೇಶದಲ್ಲಿರುವ ಚಿನ್ನ ಮತ್ತು ವಜ್ರದ ಶೋ ರೂಂನಲ್ಲಿ ಮಧ್ಯಾಹ್ನ 1.30 ರ ಸುಮಾರಿಗೆ ದರೋಡೆ ನಡೆದಿದೆ. ದರೋಡೆ ನಡೆದಾಗ 10 ಕ್ಕೂ ಹೆಚ್ಚು ಸಿಬ್ಬಂದಿ ಶೋ ರೂಂನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















