ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕ್ಷಾ ಬಂಧಿಯಾಗಿ ಶಿವಮೊಗ್ಗ #Shivamogga ಕೇಂದ್ರ ಕಾರಾಗೃಹದಲ್ಲಿದ್ದ ಉಡುಪಿ #Udupi ಜಿಲ್ಲೆ ಪೆರ್ಡೂರು ಮೂಲದ ವ್ಯಕ್ತಿಯೊಬ್ಬರು ವಯೋಸಹಜ ಅಸ್ವಸ್ಥತೆಯಿಂದ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಯನ್ನು ಬಸವ(78) ಎಂದು ವರದಿಯಾಗಿದೆ.
ಮೃತ ವ್ಯಕ್ತಿಯು ಮಧುಮೇಹ, ರಕ್ತದೊತ್ತಡ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕಾರಣ, ಈ ಕುರಿತು ಹಲವಾರು ಬಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೂ ಕಳುಹಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆತನನ್ನು ಡಿ.12ರಂದು ರಾತ್ರಿ 22.20 ಗಂಟೆಗೆ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಅಲ್ಲಿ ಒಳರೋಗಿಯಾಗಿ ಆತನನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಈ ವ್ಯಕ್ತಿಯು 2019ರಲ್ಲಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 10 ವರ್ಷ ಶಿಕ್ಷೆಗೆ ಗುರಿಯಾಗಿದ್ದರು. ನಂತರ ಉಡುಪಿಯಿಂದ ವರ್ಗಾವಣೆಗೊಂಡು ಶಿವಮೊಗ್ಗ ಕಾರಾಗೃಹದಲ್ಲಿ ಇರಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















