ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಇಲ್ಲಿನ ಭಾರತಿಪುರ ಕೆರೆಯ ಬಳಿಯಲ್ಲಿ ನಿನ್ನೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಭಾರತಿ ಪುರ ಕ್ರಾಸ್ ಬಳಿಯಲ್ಲಿ ನಿನ್ನೆ ರಾತ್ರಿ 9.30ಕ್ಕೆ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಈವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಕಾರ್ಯಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















