ಕಲ್ಪ ಮೀಡಿಯಾ ಹೌಸ್ | ಸುಬ್ರಹ್ಮಣ್ಯ |
ಸ್ನಾನಕ್ಕೆಂದು ಕುಮಾರಧಾರ ನದಿಗೆ #Kumaradhara river ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ #Death by drowning ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಮೃತರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (40) ಮತ್ತು ಸುಜೀತ್ ಗೋಳಿಯಾಡಿ (26) ಎಂದು ಗುರುತಿಸಲಾಗಿದೆ.
ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ಅನುಗ್ರಹ ಎಂಟಪ್ರೆÊðಸಸ್ ಎಂಬ ಹಾರ್ಡ್’ವೇರ್ ಅಂಗಡಿಯ ಮಾಲೀಕರಾಗಿದ್ದರು. ಸುಜೀತ್ ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರೂ ಅವಿವಾಹಿತರಾಗಿದ್ದರು.
ಕುಮಾರಧಾರ ನದಿಯಲ್ಲಿ ಸ್ನಾನ ಮಾಡುವಾಗ ಇಬ್ಬರೂ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಜೊತೆಯಲ್ಲಿದ್ದವರು ತP್ಷÀಣವೇ ಗಮನಿಸಿದರೂ ಫಲಕಾರಿಯಾಗಲಿಲ್ಲ. ಬಳಿಕ ನೀರಿನಲ್ಲಿ ಮುಳುಗಿದ್ದ ಇಬ್ಬರ ಮೃತದೇಹಗಳನ್ನು ಮೇಲೆತ್ತಲಾಗಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















