ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮ್ಮ ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯು ಜೊತೆಯಲ್ಲಿ ರಾಸಲೀಲೆ ನಡೆಸಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ #DGPRamachandraRao ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದೆ.
ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ರಾಮಚಂದ್ರ ರಾವ್ ತೆರಳಿದ್ದ ಬೆನ್ನಲ್ಲೇ ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯನ್ನು ಅಪ್ಪಿಕೊಂಡು ಮುದ್ದಾಡುತ್ತಿರುವ ಹಸಿಬಿಸಿ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಚೇರ್ ಮೇಲೆ ಕುಳಿತು ಮಹಿಳೆಯನ್ನು ಅಪ್ಪಿಕೊಂಡು ರಾಮಚಂದ್ರ ರಾವ್ ಸರಸ ನಡೆಸಿರುವುದು ವಿಡಿಯೊದಲ್ಲಿ ಕಂಡುಬರುತ್ತದೆ.
ಇದು ಅವರ ಪುತ್ರಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುವ ಮೊದಲು ನಡೆದಿರುವ ಘಟನೆ ಎಂದು ಹೇಳಲಾಗುತ್ತಿದೆ.
ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್’ನಲ್ಲಿ ಸಿಕ್ಕಿ ಜೈಲುವಾಸ ಅನುಭವಿಸುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರುವುದು ರಾಜ್ಯದಾದ್ಯಂತ ವೈರಲ್ ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















