ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್’ವೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಸುಹಾಸ್(20) ಎಂದು ಗುರುತಿಸಲಾಗಿದೆ. ತೀವ್ರಗಾಗಿ ಗಾಯಗೊಂಡಿದ್ದ ಈತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, 11 ಮಂದಿ ಗಾಯಗೊಂಡಿದ್ದಾರೆ. 12 ಮಂದಿ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಂಟೇನರ್ ವಾಹನದಲ್ಲಿ ತನ್ನ ಸ್ನೇಹಿತರೊಂದಿಗೆ ಬಿಹಾರಕ್ಕೆ ಸುಹಾಸ್ ತೆರಳುತ್ತಿದ್ದ ಎನ್ನಲಾಗಿದೆ. ಇನ್ನು ಹೊಸ ಬೈಕುಗಳನ್ನು ಹೊತ್ತು ಹೈದರಾಬಾದ್ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಸುಗಮ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಘಟನೆ ನಂತರ ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಅಪಘಾತದಲ್ಲಿ ಬಸ್ ಗುದ್ದಿದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಕಂಟೈನರ್ ಒಳಗೆ ಸಿಲುಕಿಕೊಂಡಿದೆ. ಕಟಿಂಗ್ ಮಷೀನ್ ಮೂಲಕ ಕಟ್ ಮಾಡಿ ಬೇರ್ಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















