No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಸಮರ್ಪಕ ಪಡಿತರ ವಿತರಣೆ | ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಡಾ.ಹೆಚ್. ಕೃಷ್ಣ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2026
in ಶಿವಮೊಗ್ಗ
0
ಅಸಮರ್ಪಕ ಪಡಿತರ ವಿತರಣೆ | ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಡಾ.ಹೆಚ್. ಕೃಷ್ಣ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ತಿಳಿಸಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಆಹಾರ ಆಯೋಗದ ಜಿಲ್ಲೆಯ ಭೇಟಿ ಮತ್ತು ಪರಿಶೀಲನೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಹಿಂದೆ ಆಹಾರದ ಕೊರತೆ ಇತ್ತು. ಇದೀಗ ಕೊರತೆ ಇಲ್ಲ, ಆಹಾರ ನಮ್ಮ ಹಕ್ಕಾಗಿದ್ದು ಆಹಾರ ಭದ್ರತೆ ಒದಗಿಸಲಾಗಿದೆ. ಆಹಾರ ಭದ್ರತಾ ಕಾಯ್ದೆಯು ಕಾನೂನಾತ್ಮಕ ಭದ್ರತೆ ನೀಡಿದ್ದು ಸರ್ಕಾರದ ವಿವಿಧ ಆಹಾರ ಯೋಜನೆಗಳ ಪರಿಣಾಮಕಾರಿ ಅನುಷ್ಟಾನದ ಕುರಿತು ಪರಿಶೀಲನೆ ನಡೆಸಲಾಗುವುದು. ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಎಲ್ಲಾ ಹಂತದಲ್ಲಿಯೂ ಕಾಯ್ದೆಯು ಸಮರ್ಪಕವಾಗಿ ಅನುಷ್ಟಾನವಾಗಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ನ್ಯಾಯಬೆಲೆ ಅಂಗಡಿಗಳ ಕುರಿತು ಹೆಚ್ಚಿನ ದೂರುಗಳಿವೆ. ನ್ಯಾಯಬೆಲೆ ಅಂಗಡಿಗಳು ಸಮರ್ಪಕವಾಗಿ ಪಡಿತರ ವಿತರಣೆ ಮಾಡಬೇಕು. ತಿಂಗಳಲ್ಲಿ 26 ದಿನಗಳ ಕಾಲ ಅಥವಾ ಎಲ್ಲ ಪಡಿತರದಾರರಿಗೆ ಪಡಿತರ ವಿತರಣೆ ಆಗುವವರೆಗೆ ತೆರೆದಿರಬೇಕು. 75 ವರ್ಷ ತುಂಬಿದ ವೃದ್ದರಿಗೆ ಅವರ ಮನೆ ಬಾಗಿಲಿಗೆ ಪಡಿತರ ತಲುಪಿಸಬೇಕು. ಈ ಅನ್ನ ಸುವಿಧಾ ಯೋಜನೆ ಜಾರಿಗೆ ಬಂದು 3 ತಿಂಗಳು ಆಗಿದ್ದು ಜಿಲ್ಲೆಯಲ್ಲಿ ಇದನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ಬಯೋಮೆಟ್ರಿಕ್ ಸಮಸ್ಯೆ ಹೇಳಬಾರದು. ಮ್ಯಾನುವಲ್ ಆಗಿ ಬರೆದು ಪಡಿತರ ನೀಡಬೇಕು. ಪಿಎಂ ಪೋಷಣ್ ಅಭಿಯಾನ, ಬಿಸಿಯೂಟ ಯೋಜನೆ, ವಸತಿ ನಿಲಯಗಳಲ್ಲಿ ಆಹಾರ, ಅಂಗನವಾಡಿಗಳಲ್ಲಿ ಗರ್ಭಿಣಿ, ಬಾಣಂತಿಯರಿಗೆ ನೀಡುವ ಪೌಷ್ಟಿಕಾಂಶ ಆಹಾರ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಸೇರಿದಂತೆ ಸರ್ಕಾರ ನೀಡುವ ಎಲ್ಲ ಆಹಾರ ಯೋಜನೆಗಳು ಸಮರ್ಪಕವಾಗಿ ಮತ್ತು ಗುಣಮಟ್ಟದೊಂದಿಗೆ ಫಲಾನುಭವಿಗಳಿಗೆ ತಲುಪಬೇಕು. ಈ ನಿಟ್ಟಿನಲ್ಲಿ ನಮ್ಮ ಭೇಟಿ ಮತ್ತು ಪರಿಶೀಲನೆ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ ನಿನ್ನೆಯಿಂದ ಹಲವಾರು ಘಟಕಗಳಿಗೆ ಭೇಟಿ ನೀಡಲಾಗಿದೆ. ನ್ಯಾಯಬೆಲೆ ಅಂಗಡಿಗಳು, ಸರ್ಕಾರಿ ವಸತಿ ನಿಲಯಗಳಿಗೆ ಭೇಟಿ ನೀಡಿ ಸೂಕ್ತ ನಿರ್ದೇಶನ ನೀಡಲಾಗಿದೆ. ಎಫ್‌ಸಿಐ ಗ್ರಾಮಾಂತರ ಮತ್ತು ನಗರ ಗೋದಾಮಿಗೆ ಭೇಟಿ ನೀಡಿದ್ದು 32 ಕ್ವಿಂಟಾಲ್ 43 ಕೆಜಿ ಅಕ್ಕಿ ಹೆಚ್ಚುವರಿಯಾಗಿ ದಾಸ್ತಾನಿರುವುದು ಕಂಡು ಬಂದಿದ್ದು, ದಾಸ್ತಾನು ತೆಗೆದುಕೊಂಡು ಹೋಗದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಸೂಕ್ತ ನಿರ್ದೇಶನ ನಿಡಲಾಗಿದೆ. ನಾಳೆವರೆಗೂ ಜಿಲ್ಲೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಸೂಚನೆ :

ಶಿವಮೊಗ್ಗ ನಗರದಲ್ಲಿ ಕೆಲವು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ವೇಳೆ ಹಲವಾರು ಲೋಪದೋಷಗಳು ಕಂಡು ಬಂದಿವೆ. ನ್ಯಾಯಬೆಲೆ ಅಂಗಡಿಗೆ ನಿಗದಿತ ವೇಳೆಯೊಳಗೆ ಪಡಿತರ ತಂದು ವಿತರಿಸದೇ ಇದ್ದ ಹಾಗೂ ಇತರೆ ಲೋಪದೋಷ ಕಂಡು ಬಂದ ಅಶೋಕ ನಗರದ ಮತ್ತು ಶೇಷಾದ್ರಿಪುರಂ ಹಾಗೂ ಅಣ್ಣಾನಗರದಲ್ಲಿರುವ ನ್ಯಾಯಬೆಲೆ ಅಂಗಡಿಗಳನ್ನು ರದ್ದುಪಡಿಸಲು ನಿರ್ದೇಶನ ನೀಡಿದ್ದು, ಗುತ್ಯಪ್ಪ ಕಾಲೋನಿ ಸೇರಿದಂತೆ ಎರಡು ನ್ಯಾಯಬೆಲೆ ಅಂಗಡಿಗಳಲ್ಲಿ ಲೋಪದೋಷ ಸರಿಪಡಿಸಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಪಡಿತರ ಕುರಿತು ಸಂಪೂರ್ಣವಾದ ಮಾಹಿತಿಯುಳ್ಳ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದರು.
ಭದ್ರಾವತಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ಗೆ ಭೇಟಿ ನೀಡಿದ ಸದಸ್ಯರು ಮಾತನಾಡಿ, ಒಂದೇ ಹಾಲಿನಲ್ಲಿ ನೂರಾರು ವಿದ್ಯಾರ್ಥಿಗಳು ಮಲಗುವ ವ್ಯವಸ್ಥೆ ಇದ್ದು, ವಸತಿ ಮತ್ತು ಆಹಾರದ ಬಗ್ಗೆ ವಿದ್ಯಾರ್ಥಿನಿಯರು ದೂರಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಮಾರುತಿ ಎಂ ದೊಡ್ಡಲಿಂಗಣ್ಣವರ, ಸುಮಂತ ರಾವ್, ಕೆ ಎಸ್ ವಿಜಯಲಕ್ಷ್ಮಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Previous Post

ಜ.24ರಿಂದ ಮಲೆನಾಡು ಕರಕುಶಲ ಉತ್ಸವ | ಫಲ-ಪುಷ್ಪ ಪ್ರದರ್ಶನ | ಇದು ಈ ಬಾರಿಯ ವಿಶೇಷ

Next Post

ಉದ್ಯೋಗಖಾತ್ರಿ ಯೋಜನೆ ಹೆಸರು ಬದಲಾವಣೆ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದ್ಯೋಗಖಾತ್ರಿ ಯೋಜನೆ ಹೆಸರು ಬದಲಾವಣೆ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಉದ್ಯೋಗಖಾತ್ರಿ ಯೋಜನೆ ಹೆಸರು ಬದಲಾವಣೆ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪುತ್ತೂರಿನಿಂದ ಬೇಲೂರು ಮಾರ್ಗವಾಗಿ ಜಾವಗಲ್, ಅರಸೀಕೆರೆ ಬಸ್ ಸಂಚಾರಕ್ಕೆ ಚಾಲನೆ

ಪುತ್ತೂರಿನಿಂದ ಬೇಲೂರು ಮಾರ್ಗವಾಗಿ ಜಾವಗಲ್, ಅರಸೀಕೆರೆ ಬಸ್ ಸಂಚಾರಕ್ಕೆ ಚಾಲನೆ

March 30, 2026
ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಅದ್ಧೂರಿ ಮಹಾವೀರ ಜಯಂತಿ ಆಚರಣೆ

ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಅದ್ಧೂರಿ ಮಹಾವೀರ ಜಯಂತಿ ಆಚರಣೆ

March 30, 2026
ಸದೃಢ ಆರೋಗ್ಯ ಕಲಿಸುವುದೇ ಯೋಗ: ನಾದಮಯಾನಂದನಾಥ ಶ್ರೀ

ಸದೃಢ ಆರೋಗ್ಯ ಕಲಿಸುವುದೇ ಯೋಗ: ನಾದಮಯಾನಂದನಾಥ ಶ್ರೀ

March 30, 2026
ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

March 30, 2026
ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL