ಕಲ್ಪ ಮೀಡಿಯಾ ಹೌಸ್ | ಅಮರಾವತಿ |
ಚಲಿಸುತ್ತಿದ್ದ ಸ್ಲೀಪರ್ ಬಸ್’ಗೆ #SleeperBus ಬೆಂಕಿ ಹೊತ್ತಿಕೊಂಡು 20 ಮಂದಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಘಟನೆ ಆಂಧ್ರಪ್ರದೇಶದಲ್ಲಿ #AndraPradesh ಮತ್ತೆ ನಡೆದಿದ್ದು, ಮೂವರು ಸಜೀವ ದಹನಗೊಂಡಿದ್ದಾರೆ.
ಇಂದು ನಸುಕಿನ 1.30ರ ಸುಮಾರಿಗೆ ನಂದ್ಯಾಲ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬೆಂಕಿಗೆ #Fire ಆಹುತಿಯಾದ ಬಸ್ ನೆಲ್ಲೂರಿನಿಂದ ಹೈದರಾಬಾದ್’ಗೆ ಪ್ರಯಾಣಿಸುತ್ತಿತ್ತು.
ಟೈರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡ ಬಸ್, ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂದು ಧಗಧಗನೆ ಉರಿದಿದೆ. ದುರಂತದಲ್ಲಿ ಬಸ್ ಚಾಲಕ, ಕಂಟೈನರ್ ಚಾಲಕ ಹಾಗೂ ಲಾರಿ ಕ್ಲೀನರ್ ಸಜೀವವಾಗಿ ದಹನಗೊಂಡಿದ್ದಾರೆ.
ಹೇಗಾಯ್ತು ಘಟನೆ?
ಈ ವೇಳೆ ಬಲಭಾಗದ ಟೈರ್ ಸ್ಫೋಟಗೊಂಡಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್’ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ಹಾಗೂ ಕಂಟೈನರ್ ಹೊತ್ತಿ ಉರಿದಿದೆ. ಈ ಕಂಟೈನರ್ ಬೈಕ್’ಗಳನ್ನು ಸಾಗಿಸುತ್ತಿತ್ತು ಎನ್ನಲಾಗಿದೆ.
ಬೆಂಕಿ ವ್ಯಾಪಿಸುತ್ತಿದ್ದಂತೆ ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಕಿಟಕಿ ಗಾಜುಗಳನ್ನು ಒಡೆದು ಪ್ರಯಾಣಿಕರನ್ನು ರಕ್ಷಿಸಲು ಮುಂದಾಗಿದ್ದಾರೆ. ಸ್ಥಳೀಯ ನಿವಾಸಿಗಳೂ ನೆರವಿಗೆ ಧಾವಿಸಿದ್ದಾರೆ. ಕೂಡಲೇ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಅಷ್ಟರಲ್ಲಾಗಲೇ ಬಸ್, ಕಂಟೈನರ್’ನಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದ್ದವು.
ಗಾಯಾಳುಗಳನ್ನು ನಂದ್ಯಾಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಳ ಪರಿಶೀಲನೆ ನಡೆಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















