ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾ, ಭಾವಸಾರ ಸಂಸ್ಕøತಿ ಭವನ ಟ್ರಸ್ಟ್ ಹಾಗೂ ಭಾವಸಾರ ಸಮಾಜದ ವತಿಯಿಂದ ಶಿವಮೊಗ್ಗದ ಆಲ್ಕೊಳದಲ್ಲಿ ನೂತನವಾಗಿ ನಿರ್ಮಿಸಿರುವ ಭಾವಸಾರ ಸಂಸ್ಕøತಿ ಭವನ ಲೋಕಾರ್ಪಣೆ ಸಮಾರಂಭವನ್ನು ಜ.25ರ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಶ್ರೀನಿವಾಸರಾವ್ ಪಿಸ್ಸೆ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಭವನ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕಿಶನ್‍ರಾವ್ ಗಡಾಳೆ, ಮಾಜಿ ನಗರಸಭಾ ಸದಸ್ಯ ಎನ್.ಕೆ. ಶ್ಯಾಮ್‍ಸುಂದರ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ವಿ.ಸುರೇಶ್‍ಕುಮಾರ್, ಕಾರ್ಯದರ್ಶಿ ಕೆ.ಟಿ.ಶ್ರೀನಿವಾಸ್ ರಾವ್, ಪ್ರಮುಖರಾದ ಟಿ.ವಿ.ಗಜೇಂದ್ರನಾಥ್ ಮಳೋದೆ, ಓಂ ಪ್ರಕಾಶ್ ತೇಲ್ಕರ್ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















