ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಪ್ರತಿಷ್ಠಿತ `ಭೂಮಿ’ ಸಂಸ್ಥೆ ಎರಡನೇ ವರ್ಷ ಪ್ರಶಸ್ತಿಗೆ #Award ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಮಾತನಾಡಿದ ಭೂಮಿ ಸಂಸ್ಥೆಯ ಮಾಧ್ಯಮ ಸಲಹೆಗಾರರಾದ ಹನುಮೇಶ್ ಕೆ. ಯಾವಗಲ್, ಎರಡನೇ ವರ್ಷದ,’ಭೂಮಿ’ ರೈತ ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 27ರಂದು ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಒಟ್ಟು ಐದು ವಿಭಾಗಗಳಲ್ಲಿ ಇನ್ನೂರಕ್ಕೂ ಹೆಚ್ಚು ರೈತರಿಗೆ ‘ಭೂಮಿ’ ರೈತ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
`ಭೂಮಿ’ ಡಿಜಿಟಲ್ ಅಗ್ರಿ ಫ್ಲಾಟ್ ಫಾರ್ಮ್, #DigiralAgriPaltform ಕಳೆದ ವರ್ಷದಿಂದ ಪ್ರಶಸ್ತಿ ನೀಡಲು ಆರಂಭಿಸಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ರೈತರಿಗೆ ಸಾಮಾಜಿಕ ಮನ್ನಣೆ ಸಿಗಬೇಕು ಎಂಬ ಮಹತ್ವದ ಉದ್ದೇಶದಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ ಎಂದರು.
ಕೃಷಿ #Agricultural ವಲಯದಿಂದ ಯುವ ಜನಾಂಗ ಕಾಲಕ್ರಮೇಣ ದೂರ ಸರಿಯುತ್ತಿರುವುದನ್ನು ತಡೆಯುವುದು ಹಾಗೂ ಕೃಷಿ ಕೂಡ ಲಾಭದಾಯಕ ಎಂಬುದನ್ನು ತಿಳಿಸಲು ಭೂಮಿ ಸಂಸ್ಥೆ ಡಿಜಿಟಲ್ ತಂತ್ರಜ್ಞಾನ ಬಳಕೆ ಮೂಲಕ ರೈತರಿಗೆ ವಿವಿಧ ಸೇವೆಗಳನ್ನು ನೀಡುತ್ತಿದೆ. ಉತ್ತಮ ಬೆಳೆ ಇಳುವರಿ, ಸಾವಯವ ಮತ್ತು ನೈಸರ್ಗಿಕ ಕೃಷಿ ಶ್ರೇಠತೆ, ವರ್ಷದ ಪ್ರಗತಿಪರ ರೈತ ಪ್ರಶಸ್ತಿ ಸೇರಿದಂತೆ ಐದು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆ ಹೇಳಿದೆ.
ಪ್ರಶಸ್ತಿ ಆಯ್ಕೆಗೆ ಕೃಷಿ ವಿಜ್ಞಾನಿಗಳು, ಕೃಷಿ ವಿಶ್ವವಿದ್ಯಾಲಯದ #AgriculturalUniversity ಉಪನ್ಯಾಸಕರು ಸೇರಿದಂತೆ ಹಲವು ಗಣ್ಯರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ರೈತರಿಗೆ ಸಾರಿಗೆ, ವಸತಿ ಹಾಗೂ ಊಟದ ವ್ಯವಸ್ಥೆಯನ್ನು ‘ಭೂಮಿ’ ಸಂಸ್ಥೆಯೇ ಮಾಡಲಿದೆ ಎಂದು ತಿಳಿಸಿದರು.
ಪ್ರಗತಿಪರ ರೈತರು, ಉದ್ಯಮಶೀಲ ರೈತರು ಸೇರಿದಂತೆ ಹಲವು ವಿಭಾಗಗಳಲ್ಲಿ ರೈತರನ್ನು ಗುರುತಿಸಿ, ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ‘ಭೂಮಿ’ ಸಂಸ್ಥೆಯ ಮಾಧ್ಯಮ ಸಲಹೆಗಾರರು ತಿಳಿಸಿದ್ದಾರೆ.
ರಾಜ್ಯದ 25 ಜಿಲ್ಲೆಗಳ ಆಕಾಂಕ್ಷಿಗಳು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳಬೇಕು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕೃಷಿ ಕುರಿತ ಉಪನ್ಯಾಸ ಕೂಡ ನಡೆಯಲಿದೆ ಎಂದು ಹನುಮೇಶ್ ಕೆ ಯಾವಗಲ್ ವಿವರಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು www.bhoomeeawards.com ವೆಬ್’ಸೈಟ್’ಗೆ ಭೇಟಿ ಮಾಡಿ ಅಥವಾ ದೂರವಾಣಿ ಸಂಖ್ಯೆ 7483074266 ಕರೆ ಮಾಡಿ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















