ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಎರಡು ತಾಲ್ಲೂಕುಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ರಿಂದ 3 ದಶಕಗಳ ಕಾಲ ತಲೆ ಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣದ ಆರೋಪಿಗಳನ್ನು ಕೊನೆಗೂ ಬಂಧಿಸಲಾಗಿದೆ.
ಘಟನೆ-1: ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎಲ್’ಪಿಆರ್ 10/2023 ಕಲಂ 353, 332, 504, 506, ಸಹಿತ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಮ್ರಾನ್(34) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸರು ಈತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈತನ ವಿರುದ್ಧ ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಚಿದಾನಂದ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರವಿಕುಮಾರ್ ಮತ್ತು ಕುಮಾರನಾಯ್ಕ ರವರ ತಂಡವನ್ನು ರಚಿಸಲಾಗಿತ್ತು. ಈ ತಂಡವು ಸತತ ಪ್ರಯತ್ನದ ನಂತರ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಪ್ರಕರಣ-2: ಆನವಟ್ಟಿ ಠಾಣೆಯಲ್ಲಿ ಕಲಂ 379 ಐಪಿಸಿ ಮತ್ತು 86, 87 ಕೆಎಫ್ ಆಕ್ಟ್’ರಲ್ಲಿ ಸೊರಬ ನ್ಯಾಯಾಲಯಕ್ಕೆ ಕಳೆದ 25 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳಾದ ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಮೂಲದ ಹೈದರ್ ಆಲಿ(45), ಹಾಗೂ ಉಸ್ಮಾನ್(43)ಅವರುಗಳನ್ನು ಬಂಧಿಸಲಾಗಿದೆ.

ಶಿಕಾರಿಪುರ ಡಿವೈಎಸ್ಪಿ ಕೆ.ಇ. ಕೇಶವ, ಸೊರಬ ಸಿಪಿಐ ಮಹಾಂತೇಶ್ ಕೆ ಲಂಬಿ ಮತ್ತು ಶಿಕಾರಿಪುರ ನಗರ ಸಿಪಿಐ ಸಂತೋಷ್ ಎಂ ಪಾಟೀಲ್ ರವರ ಮಾರ್ಗದರ್ಶನದಲ್ಲಿ, ಸೊರಬ ಠಾಣೆಯ ಸೋಮನಾಯ್ಕ್ ಮತ್ತು ಶಶಿಧರ್ ಅವರುಗಳು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















