ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ಕನ್ನಡ, ಸಂಸ್ಕೃತಿ, ಸಂಸ್ಕಾರ ಮತ್ತು ರಾಷ್ಟ್ರೀಯತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ರಜನಾ ಫೌಂಡೇಶನ್ ಟ್ರಸ್ಟ್ ಶಿಕ್ಷಣ ಕ್ಷೇತ್ರ ಹಾಗೂ ಕುಟುಂಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ವಿವಿಧ ಚಟುವಟಿಕೆಗಳ ಮೂಲಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಕೆಲಸ ಶ್ಲಾಘನೀಯ ಎಂದು ಕಿರ್ಲೋಸ್ಕರ್ ಆಫೀಸರ್ಸ್ ಕ್ಲಬ್ ಅಧ್ಯಕ್ಷರಾದ ಕಮಲಾ ಗುಮಾಸ್ತೆ ಅಭಿಪ್ರಾಯಪಟ್ಟರು.
ಹೊಸಪೇಟೆಯ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ “ಭಾರತವನ್ನು ತಿಳಿಯಿರಿ” ಎಂಬ ವಿಷಯ ಕುರಿತು ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯ
ಪ್ರಥಮ ಹಂತದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ಹೊಸಪೇಟೆಯ ನರ್ಬಾದಬಾಯಿ ಪ್ರೌಢಶಾಲೆಯಲ್ಲಿ ಎರಡನೇ ಹಂತದ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳು ಮತ್ತು ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಹೊಸಪೇಟೆಯ ಖಜಾನೆಯ ನಿವೃತ್ತ ಅಧಿಕಾರಿ ವೆಂಕಟೇಶ್ ಮೂರ್ತಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೋತ್ಸಾಹಕಾರಿ ಮಾತುಗಳನ್ನು ಆಡಿದರು.
ಈ ಅಂತಿಮ ಸ್ಪರ್ಧೆಯಲ್ಲಿ ಹೊಸಪೇಟೆ ನೆಹರು ಕಾಲೋನಿಯ ಸರ್ಕಾರಿ ಪ್ರೌಢಶಾಲೆ – ಪ್ರಥಮ ಸ್ಥಾನ, ನರ್ಬಾದಬಾಯಿ ಪ್ರೌಢಶಾಲೆ – ದ್ವಿತೀಯ ಸ್ಥಾನ. ಕೆ.ಎಸ್.ಪಿ.ಎಲ್. ಪ್ರೌಢಶಾಲೆ – ತೃತೀಯ ಸ್ಥಾನ ಪಡೆದರು.
ಈ ಕಾರ್ಯಕ್ರಮದ ಮುಖ್ಯ ರೂವಾರಿಯಾಗಿದ್ದ ರಚನಾ ಫೌಂಡೇಶನ್ ಅಧ್ಯಕ್ಷರಾದ ಚಂದ್ರಶೇಖರ್ ರಸಪ್ರಶ್ನೆ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಿಕೊಟ್ಟರು.
ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ ಪೂರ್ಣಗೊಳಿಸುವಲ್ಲಿ ಹೊಸಪೇಟೆಯ ರಚನಾ ಫೌಂಡೇಶನ್ ಸಂಚಾಲಕರು ಹಾಗೂ ಕಿರ್ಲೋಸ್ಕರ್ ಕಾರ್ಖಾನೆಯ ಸುರಕ್ಷತಾ ವಿಭಾಗದ ಮ್ಯಾನೇಜರ್ ಮುರುಳೀಧರ್ ನಾಡಿಗೇರ್ ಅವರು ಕಳೆದ ಒಂದು ತಿಂಗಳಿನಿಂದ ಶ್ರಮವಹಿಸಿ ಪ್ರಮುಖ ಪಾತ್ರ ವಹಿಸಿದರು.
ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















