ಕಲ್ಪ ಮೀಡಿಯಾ ಹೌಸ್ | ಉಡುಪಿ |
ರಾಜ್ಯದಲ್ಲಿರುವ 116 #Island ಐಲ್ಯಾಂಡ್’ಗಳು ನಿರ್ಲಕ್ಷಕ್ಕೆ ಒಳಗಾಗಿದ್ದು, ಇವುಗಳನ್ನು ಬಳಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ಮಾಡಬೇಕಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಇಲ್ಲಿನ ಸೇಂಟ್ ಮೇರಿಸ್ ದ್ವೀಪದಲ್ಲಿ ಗಣರಾಜ್ಯೋತ್ಸವ #RepublicDay ಆಚರಿಸಲಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಸೇಂಟ್ ಮೇರೀಸ್ #St.Mary’sisland ಸೇರಿದಂತೆ ರಾಜ್ಯದಲ್ಲಿ 116 ಐಲ್ಯಾಂಡ್’ಗಳು ನಿರ್ಲಕ್ಷಕ್ಕೆ ಒಳಗಾಗಿದೆ. ಅದ್ಬುತ ಸಂಪನ್ಮೂಲಗಳಿದ್ದರೂ ಇವುಗಳನ್ನು ಪ್ರವಾಸೋದ್ಯಮ ದೃಷ್ಠಿಯಿಂದ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ ಎಂದರು.
ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿರುವ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ #Tourism ಬೆಳೆಸಲು ನಾವು ಹೆಜ್ಜೆ ಇಟ್ಟಿದ್ದೇವೆ. ರಾಜ್ಯ ಸರ್ಕಾರದ ಈ ಹೊಸ ಯೋಜನೆಗೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ನಿಮ್ಮೆಲ್ಲರ ಸಲಹೆ, ಮಾರ್ಗದರ್ಶನದೊಂದಿಗೆ ಮುಂದಿನ ದಿನಗಳಲ್ಲಿ ಈ ಭಾಗವನ್ನು ಅಭಿವೃದ್ಧಿಪಡಿಸೋಣ ಎಂದರು.
ಅಪರೂಪದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಕರ್ನಾಟಕದ ಅತೀ ದೊಡ್ಡ ಐಲ್ಯಾಂಡ್ ಎನ್ನುವ ಹೆಮ್ಮೆಗೆ ಕೂಡ ಪಾತ್ರವಾಗಿರುವ ಸೇಂಟ್ ಮೇರೀಸ್ ಐಲ್ಯಾಂಡ್’ನಲ್ಲಿ ಇಂದು ಧ್ವಜಾರೋಹಣ ನೆರವೇರಿಸಿ, ನಿಮ್ಮನ್ನೆಲ್ಲ ಉದ್ದೇಶಿಸಿ ಮಾತನಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ನಾನು ಬರುವಾಗ ಮೊಟ್ಟ ಮೊದಲ ಬಾರಿಗೆ #CoastGuard ಕರಾವಳಿ ಕಾವಲು ಪಡೆಯ 11 ಬೋಟ್’ಗಳನ್ನು ಇನ್’ಸ್ಪೆಕ್ಷನ್ ಮಾಡುತ್ತ ಬಂದೆ. ಇದು ನನಗೆ ಬಹಳ ರೋಮಾಂಚಕಾರಿ ಅನುಭವವಾಗಿದೆ ಎಂದರು.
ಕರಾವಳಿ ಕಾವಲು ಪಡೆಯ ಪೊಲೀಸರು ಉದ್ಯೋಗದ ಜೊತೆಯಲ್ಲಿ ರಾಷ್ಟ್ರ ರಕ್ಷಣೆಯಲ್ಲೂ ಸಹ ಸೇವೆ ಸಲ್ಲಿಸುತ್ತಿದ್ದೀರಿ. ಹಗಲು ರಾತ್ರಿ ನಿಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡುವ ನೀವು ನಿಜವಾದ ದೇಶಭಕ್ತರು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಗೂ ಸಹ ಗಮನ ಹರಿಸಿ ಎಂದರು.
ದ್ವೀಪಕ್ಕೆ ಆಗಮಿಸುವ ವೇಳೆ ಕರಾವಳಿ ಕಾವಲು ಪಡೆಯ 11 ಬೋಟ್’ಗಳಿಂದ ಮೊಟ್ಟಮೊದಲ ಬಾರಿಗೆ ನೀಡಲಾದ ಭವ್ಯ `ಗೌರವ ರಕ್ಷೆ’ ವಿಶೇಷವಾಗಿತ್ತು. ಸಮುದ್ರದ ಮಧ್ಯೆ ನಡೆದ ಈ ಸಾಹಸಮಯ ಗೌರವ ವಂದನೆ ಅತ್ಯಂತ ಗಮನ ಸೆಳೆಯಿತು.
77ನೇ ಗಣರಾಜ್ಯೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಡಳಿತ, ಕರಾವಳಿ ಕಾವಲು ಪೊಲೀಸ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದ ಪ್ರಮುಖ ಆಕರ್ಷಣೆಯೆಂದರೆ, ದ್ವೀಪಕ್ಕೆ ಆಗಮಿಸುವ ವೇಳೆ ಕರಾವಳಿ ಕಾವಲು ಪಡೆಯ 11 ಬೋಟ್ಗಳಿಂದ ಮೊಟ್ಟಮೊದಲ ಬಾರಿಗೆ ನೀಡಲಾದ ಭವ್ಯ ‘ಗೌರವ ರಕ್ಷೆ’ #GuardofHonour ಸಮುದ್ರದ ಮಧ್ಯೆ ನಡೆದ ಈ ಸಾಹಸಮಯ ಗೌರವ ವಂದನೆ ಅತ್ಯಂತ ಗಮನ ಸೆಳೆಯಿತು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ ಕೊಡವೂರು, ಜಿಲ್ಲಾಧಿಕಾರಿಗಳಾದ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















