ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ನದಿ ಸೇತುವೆಯ ಮೇಲೆ ಖಾಸಗಿ ಬಸ್ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ #Accident on Tunga river bridge ಟಿಟಿ ಚಾಲಕ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಹೇಗಾಯ್ತು ಘಟನೆ?
ಬಳ್ಳಾರಿ ಕಡೆಯಿಂದ ಶಿವಮೊಗ್ಗ ನಗರಕ್ಕೆ ಪ್ರವೇಶಿಸುತ್ತಿದ್ದ ಟಿಟಿ ವಾಹನ ಹಾಗೂ ಸಹ್ಯಾದ್ರಿ ಕಾಲೇಜು ಕಡೆಯಿಂದ ಸಂಚರಿಸುತ್ತಿದ್ದ ಖಾಸಗಿ ಬಸ್ ನಡುವೆ ಸೇತುವೆಯ ಮೇಲೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನದ ಮುಂಭಾಗ ಜಖಂಗೊಂಡಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳು ಚಾಲಕನನ್ನು ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೇತುವೆಯ ಮಧ್ಯೆಯೇ ಅಪಘಾತ ಸಂಭವಿಸಿದ ಕಾರಣ, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















