ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಭಾರತದ ಗಣರಾಜ್ಯೋತ್ಸವ ದಿನಾಚರಣೆ ದೇಶದ ಏಕತೆ ಮತ್ತು ಸಮಗ್ರತೆಯ ಸಂಕೇತವಾಗಿದ್ದು , ದೇಶದ ಸಾರ್ವಭೌಮತೆ, ಪ್ರಜಾಪ್ರಭುತ್ವ ಹಾಗೂ ಗಣರಾಜ್ಯದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ. ಪ್ರತಿಯೊಬ್ಬ ಭಾರತೀಯ ಪ್ರಜೆಯು ಹೆಮ್ಮೆ ಪಡುವ ದಿನವಾಗಿದೆ” ಎಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿ ಡಾ. ಶಿವಕುಮಾರ್ ಹೇಳಿದರು
ಶಿಕಾರಿಪುರ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಎಲ್ಲಾ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ 77ನೇ ಗಣರಾಜ್ಯೋತ್ಸವ #Republic Day ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಭಾರತದ ಸಂವಿಧಾನ ಅಂಗೀಕಾರಗೊಂಡ ದಿನವಿದು. ವಿಶ್ವಕ್ಕೆ ಮಾದರಿ ಸಂವಿಧಾನವನ್ನು ನಮಗೆ ನೀಡಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಗತ್ತಿನಲ್ಲಿಯೇ ಉತ್ತಮ, ಬಲಿಷ್ಠ ಹಾಗೂ ವಿಕಸಿತ ಭಾರತ ನಿರ್ಮಾಣಕ್ಕೆ ಅಗತ್ಯ ಸಂವಿಧಾನದ ಜೊತೆಗೆ ಸ್ವಾತಂತ್ರ‍್ಯ, ಸಮಾನತೆ, ಸಹೋದರತ್ವ, ಏಕತೆ, ಭ್ರಾತೃತ್ವ ಸ್ವಾತಂತ್ರ‍್ಯದ ಮೌಲ್ಯಗಳನ್ನು ನಮಗೆ ನೀಡಿದ್ದಾರೆ. ಸಂವಿಧಾನದಿಂದಾಗಿ ನಮಗೆ ಸಮಾನತೆ, ಸ್ವಾತಂತ್ರ್ಯ, ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಇತರೆ ಹಕ್ಕುಗಳು ಪ್ರತಿಯೊಬ್ಬರಿಗೂ ದೊರೆತಿದೆ. ಭಾರತ ವಿಭಿನ್ನ ಭಾಷೆ ಸಂಸ್ಕೃತಿಯ ನೆಲೆವೀಡು. ಇಂದು ನಾವು ಜಾಗತಿಕ ಶಕ್ತಿಯಾಗಿ ಬೆಳೆಯುತ್ತಿದ್ದೇವೆ. ಬಾಹ್ಯಾಕಾಶದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಇದ್ದೇವೆ. ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜವನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಇಂದಿನ ಯುವಕರು ದೇಶ ಭಕ್ತಿಯನ್ನು ರೂಢಿಸಿಕೊಳ್ಳಬೇಕು” ಎಂದರು. ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಶಿವಕುಮಾರ್ ಅವರು 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ, ಗೌರವ ಧ್ವಜ ವಂದನೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿ ಕುಬೇರಪ್ಪ ಕೆ, ಅಂಗಸಂಸ್ಥೆಗಳ ಪ್ರಾಚಾರ್ಯರುಗಳಾದ ಡಾ. ರವೀಂದ್ರ ಕೆ ಎಸ್, ಡಾ. ವಿರೇಂದ್ರ, ವಿದ್ಯಾಶಂಕರ್, ವಿಶ್ವನಾಥ, ಪ್ರಶಾಂತ ಕುಮಾರ್, ಮೈತ್ರಿ ಪ್ರಭಾರಿ ಮುಖ್ಯೋಪಾಧ್ಯಾಯ ಪ್ರಶಾಂತ ಕುಬಸದ್ ಹಾಗೂ ಸಂಸ್ಥೆಯ ಎಲ್ಲಾ ಪ್ರಾಧ್ಯಾಪಕರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳ ಪಥ ಸಂಚಲನವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಾದ ಕು.ಪ್ರಣಿತಾ, ಅದಿತಿರಾವ್, ಕೃತಿಕಾ ಮತ್ತು ತಂಡದವರು, ಪೂರ್ವಿಕಾ, ಮೆಹನಾಜ್ ಕ್ರುಯೆಷಿ ಹಾಗೂ ರಶ್ಮಿ ಇವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲಾಯಿತು. ಪಥ ಸಂಚಲನದಲ್ಲಿ ಭಾಗವಹಿಸಿದ ಅತ್ಯುತ್ತಮ ತಂಡಗಳಿಗೆ ಬಹುಮಾನವನ್ನು ಘೋಷಿಸಲಾಯಿತು. ಮೈತ್ರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆ, ಕುಮದ್ವತಿ ಪ್ರೌಢಶಾಲೆ ಹಾಗೂ ಕುಮದ್ವತಿ ಕೇಂದ್ರಯ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಕುಮದ್ವತಿ ಪಿಯು ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ತಂಡಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡವು.
ಕಾರ್ಯಕ್ರಮವನ್ನು ಕು. ಅಕ್ಷತ ಸಂಗಡಿಗರು ಪ್ರಾರ್ಥಿಸಿ, ಉಪನ್ಯಾಸಕಿ ಹಂಸ ಸ್ವಾಗತಿಸಿ, ಅಶ್ವಿನಿ ವಂದಿಸಿ, ಪೂರ್ಣಿಮಾ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















