ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶ್ ನೀಟ್ ಅಕಾಡೆಮಿ, #Desh Neet Academy ಶಿವಮೊಗ್ಗ ವತಿಯಿಂದ ಆಯೋಜಿಸಲಾದ “ದೇಶ್ ಸಿಂಧೂರ್ ಸಂಭ್ರಮ–2025” ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಖ್ಯಾತ ನರರೋಗ ತಜ್ಞರಾದ ಡಾ. ನಾರಾಯಣ ಪಂಜಿ, ಖ್ಯಾತ ಚಲನಚಿತ್ರ ನಟಿ ಪ್ರೇಮಾ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯ ಕಾಂತೇಶ, ದೇಶ್ ನೀಟ್ ಅಕಾಡೆಮಿಯ ಸಂಸ್ಥಾಪಕ ಅವಿನಾಶ್, ಎಚ್ಚರಿಕೆ ಪತ್ರಿಕೆಯ ಸಂಪಾದಕ ಸೂರ್ಯನಾರಾಯಣ ಸೇರಿದಂತೆ ಅನೇಕ ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















