ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲ್ಲೂಕಿನ ಅರಳೀಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು-ವಾಂತಿ ಕಾಣಿಸಿಕೊಂಡ ಪರಿಣಾಮ ಮಕ್ಕಳು ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದ್ದು, ಮಕ್ಕಳನ್ನು ದಾಖಲು ಮಾಡಲಾಗಿದೆ.
ಮಧ್ಯಾಹ್ನ ಊಟದ ಬಳಿಕ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಊಟದ ಬಳಿಕ ಮಕ್ಕಳಿಗೆ ವಿಟಮಿನ್ ಮತ್ತು ಐರನ್ ಟ್ಯಾಬ್ಲೆಟ್ ವಿತರಿಸಿದ್ದರು. ಇದನ್ನು ನುಂಗಿದ ಬಳಿಕ ಮಕ್ಕಳು ಹೊಟ್ಟೆ ನೋವು ಎಂದು ವಾಂತಿ ಮಾಡಿಕೊಂಡಿದ್ದಾರೆ.
ತಕ್ಷಣವೇ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಚಿಕಿತ್ಸೆ ಮುಂದುವರೆದಿದ್ದು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಸ್ಥಳದಲ್ಲೇ ಬೀಡು ಬಿಟ್ಟು ಮಾಹಿತಿ ಪಡೆಯುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















