ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ರಾಗಿಗುಡ್ಡದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸುಮಾರು 14 ವಿದ್ಯಾರ್ಥಿಗಳಿಗೆ ಮೂರು ದಿನಗಳಿಂದ ವಿಪರೀತ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಸತಿ ಶಾಲೆಯಲ್ಲಿರುವ 14 ವಿದ್ಯಾರ್ಥಿಗಳಿಗೆ ಕಳೆದ ಮೂರು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿದೆ. ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ಇಂದು ಎಲ್ಲ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಎಲ್ಲ ಮಕ್ಕಳಿಗೂ ಸಹ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ಒಳರೋಗಿಗಳಾಗಿ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
6 ರಿಂದ 10 ತರಗತಿ ವಿದ್ಯಾರ್ಥಿಗಳಿಗೆ ಕೆಮ್ಮು ಕಾಣಿಸಿಕೊಂಡಿದ್ದು, ಮೂರು ದಿನಗಳಿಂದಲೂ ಬಾಧಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕಗೊAಡ ವಸತಿ ಶಾಲೆಯ ವಾರ್ಡನ್ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾಗಿಗುಡ್ಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಇದಾಗಿದೆ.
ಡಿಸಿ, ಸಿಇಒ ಭೇಟಿ
ಇನ್ನು, ವಿಷಯ ತಿಳಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಮಕ್ಕಳ ಕುರಿತಾಗಿ ಮಾಹಿತಿ ಪಡೆದುಕೊಂಡು, ನಂತರ ಶಾಲಾ ಶಿಕ್ಷಕರು ಹಾಗೂ ವಾರ್ಡನ್ ಅವರುಗಳ ಜೊತೆಯಲ್ಲಿ ಸಭೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















