ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬಹಳಷ್ಟು ಬಲಿಷ್ಠವಾದ ರಾಷ್ಟ್ರವಾಗಿದೆ ಎಂದು ನಗರದ ಖ್ಯಾತ ಉದ್ಯಮಿ ವಿವೇಕಾನಂದ ಶೆಣೈ ಹೇಳಿದರು.
ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಸಿ ಅವರು ಮಾತನಾಡಿದರು.
ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬಹಳಷ್ಟು ಬಲಿಷ್ಠವಾದ ರಾಷ್ಟ್ರವಾಗಿದೆ ಹಾಗೂ ಜನರ ಪಾಲ್ಗೊಳ್ಳುವಿಕೆಯಿಂದ ಪ್ರಜಾಪ್ರಭುತ್ವ ಇನ್ನಷ್ಟು ಬಲ ಪಡೆಯುತ್ತದೆ ಎಂದು ಹೇಳಿದರು.
ಎಂಟನೇ ತರಗತಿಯ ವಿದ್ಯಾರ್ಥಿನಿ ದಿಯಾ ಶೆಟ್ಟಿ ಹಾಗೂ ಪ್ರಾಥಮಿಕ ವಿಭಾಗದ ಶಿಕ್ಷಕಿ ರಮಿತಾ ಶೆಟ್ಟಿ ಗಣರಾಜ್ಯೋತ್ಸವದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.
ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಮುಖ್ಯ ಶಿಕ್ಷಕಿಯಾದ ಪ್ರೌಢಶಾಲಾ ವಿಭಾಗದ ಜೋಸ್ನ ಸ್ನೇಹಲತಾ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಸಂಸ್ಥೆಯ ಆಪ್ತ ಸಮಾಲೋಚಕಿಯಾದ ಡಾ.ಸಿ. ಶಾಲೆಟ್ ಸೀಕ್ವೇರಾ, ಸಂಸ್ಥೆಯ ಆಡಳಿತಾಧಿಕಾರಿಯಾದ ಕಿರಣ್ ಕ್ರಾಸ್ತ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಾಥಮಿಕ ವಿಭಾಗದ ಶಿಕ್ಷಕಿಯಾದ ವಿಜೇತಾ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















