ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಖಾಸಗಿ #PrivateBus ಸ್ಲೀಪರ್ ಬಸ್’ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಇಡೀ ಬಸ್ ಧಗಧಗನೆ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ರಿಪ್ಪನ್’ಪೇಟೆ ಬಳಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಹೊಸನಗರದಿಂದ ಶಿವಮೊಗ್ಗ #Shivamogga ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಡೂರು ಸಮೀಪದ 9ನೇ ಮೈಲಿಕಲ್ಲು ಬಳಿಯಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ.
ಘಟನೆಯಲ್ಲಿ ಬಸ್ ಸಂಫೂರ್ಣ ಸುಟ್ಟು ಕರಕಲಾಗಿದೆ. ಆದರೆ, ಅದೃಷ್ಠವಷಾತ್ ಬಸ್ ಒಳಗಿದ್ದ ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಘಟನೆಯಲ್ಲಿ ಬಸ್ ಚಾಲಕ ಹಾಗೂ ಕ್ಲೀನರ್’ಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದೆ. ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಬಸ್’ನಿಂದ ಹೊರಬರುವ ವೇಳೆ 8 ಪ್ರಯಾಣಿಕರಿಗೂ ಸಣ್ಣ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಖಾಸಗಿ ಬಸ್’ನಲ್ಲಿ ದಿಢೀರ್ ಬೆಂಕಿ #Fire ಕಾಣಿಸಿಕೊಂಡಿದ್ದು, ಎಚ್ಚೆತ್ತ ಚಾಲಕ ಬಸ್ಸನನ್ನು ಕೂಡಲೆ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾರೆ. ಎಮರ್ಜನ್ಸಿ ಡೋರ್ ಮೂಲಕ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದ್ದಾರೆ ಎಂದು ಹೇಳಲಾಗಿದೆ.
ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಹಲವರಿಗೆ ಸುಟ್ಟ ಗಾಯವಾಗಿದೆ. ಎಲ್ಲರಿಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 8 ಪ್ರಯಾಣಿಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು, ರಸ್ತೆಯಲ್ಲಿ ಸಾಗುತ್ತಿದ್ದವರು ಪ್ರಯಾಣಿಕರ ನೆರವಿಗೆ ಧಾವಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು.
ಸುದ್ದಿ ತಿಳಿದ ಕೂಡಲೇ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















