ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಮುಂಜಾನೆ ಸಮಯದಲ್ಲಿ ಹಾಲಿನ ಪ್ಯಾಕೆಟ್‌ಗಳನ್ನು #MilkPacket ಕದ್ದೊಯ್ದಿರುವ ಘಟನೆ ಸವಳಂಗ ರಸ್ತೆಯಲ್ಲಿರುವ ನಂದಿನಿ ಹಾಲಿನ ಡೈರಿಯ ಬಳಿ ನಡೆದಿದೆ.
ಸವಳಂಗ ರಸ್ತೆಯಲ್ಲಿರುವ #NandiniMilk ನಂದಿನಿ ಹಾಲಿನ ಡೈರಿ ಬಳಿ ಮುಂಜಾನೆ ಡೈರಿಯ ಮುಂಭಾಗ ಹಾಲಿನ ಕ್ರೇಟ್‌ಗಳನ್ನು ಇಡಲಾಗಿತ್ತು. ಈ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಯಾರೂ ಇಲ್ಲದ ಸಮಯ ನೋಡಿ ಹಾಲಿನ ಪ್ಯಾಕೆಟ್‌ಗಳನ್ನು ಕದ್ದು ಪರಾರಿಯಾಗಿದ್ದಾನೆ.
ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ
ಬೈಕ್‌ನಲ್ಲಿ ಬಂದ ಕಳ್ಳ ಹಾಲಿನ ಪ್ಯಾಕೆಟ್ ಕಳ್ಳತನ ಮಾಡುತ್ತಿರುವ ದೃಶ್ಯವು ಡೈರಿಯ ಮುಂಭಾಗ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಿಲಾಡಿ ಕಳ್ಳನ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















