ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೈನ್ ಪಬ್ಲಿಕ್ ಶಾಲೆಯಲ್ಲಿ #Jain Public School ವಿವಿಧತೆಯಲ್ಲಿ ಏಕತೆಯ ಸ್ಮರಣೆಯೊಂದಿಗೆ 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಜೈನ್ ಪಬ್ಲಿಕ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ #Republic Day ಅತ್ಯಂತ ಸಂಭ್ರಮ ಮತ್ತು ಗೌರವದಿಂದ ನೆರವೇರಿತು.
ಈ ವಿಶೇಷ ದಿನದಂದು ಶಾಲೆಗೆ ಮುಖ್ಯ ಅತಿಥಿಗಳಾಗಿ ಸುಬೇದಾರ್ ಮೇಜರ್ ಎಲ್.ಎಸ್. ರಂಗನಾಥ್ ಹಾಗೂ ಸುಬೇದಾರ್ ಮೇಜರ್ ಜಿ.ಎಲ್. ಯೋಗಾನಂದ ಅವರು ಆಗಮಿಸಿ ಕಾರ್ಯಕ್ರಮವನ್ನು ಗೌರವಿಸಿದರು.
ಶಾಲೆಯ ಸಿ.ಓ ಆರ್. ಸುಮಂತ್, ಶಾಲೆಯ ಸೌಲಭ್ಯ ವ್ಯವಸ್ಥಾಪಕರಾದ ವಿಜಯಕುಮಾರ್ ಹಾಗೂ ಶಾಲೆಯ ಪ್ರಾಂಶುಪಾಲರಾದ ಡಾ. ಪ್ರಿಯದರ್ಶಿನಿ ಅವರ ಅನುಪಸ್ಥಿತಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವು ಶುಭಾರಂಭಗೊಂಡಿತು.
ಮುಖ್ಯ ಅತಿಥಿಗಳು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಮಹತ್ವದ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ವಿವಿಧತೆಯಲ್ಲಿ ಏಕತೆ ಎಂಬ ಸಂದೇಶವನ್ನು ಸಾರುವಂತೆ ಮಕ್ಕಳು ವಿವಿಧ ರಾಜ್ಯಗಳ ವೈವಿಧ್ಯಮಯ ಉಡುಪುಗಳನ್ನು ಧರಿಸಿ ನಾವೆಲ್ಲರೂ ಒಂದೇ ಎಂಬ ಹಾಡಿಗೆ ಹೆಜ್ಜೆ ಹಾಕಿ ಸಾಂಸ್ಕೃತಿಕ ವೈವಿಧ್ಯವನ್ನು ಮನಮುಟ್ಟುವಂತೆ ಪ್ರದರ್ಶಿಸಿದರು.
ಇದೇ ವೇಳೆ ಆರನೇ ಮತ್ತು ಏಳನೇ ತರಗತಿಯ ವಿದ್ಯಾರ್ಥಿಗಳ ವಿಶಿಷ್ಟ ಕರಾಟೆ ಪ್ರದರ್ಶನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿವರ್ಗ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಕಾರ್ಯಕ್ರಮವು ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಸಂದೇಶದೊಂದಿಗೆ ಯಶಸ್ವಿಯಾಗಿ ಸಮಾಪ್ತಿಯಾಯಿತು.
ಶಿವಮೊಗ್ಗ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಜೈನ್ ಪಬ್ಲಿಕ್ ಶಾಲೆ ಸತತ 13 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















