ಕಲ್ಪ ಮೀಡಿಯಾ ಹೌಸ್ | ಆನೇಕಲ್ |
ಸಿಗ್ನಲ್ ತಪ್ಪಿಸುವ ಯತ್ನದಲ್ಲಿ ಕಾರೊಂದು #SchoolBus ಶಾಲಾ ಬಸ್’ಗೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿರುವ ಘಟನೆ ಬನ್ನೇರುಘಟ್ಟ ರಸ್ತೆ ವ್ಯಾಪ್ತಿಯ ಅರಕೆರೆ ಬಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ಪ್ರಕಾರ, ಕಾರು ಚಾಲಕ ಸಿಗ್ನಲ್ ಉಲ್ಲಂಘಿಸಿ ವೇಗವಾಗಿ ಸಾಗಲು ಪ್ರಯತ್ನಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ರಸ್ತೆಯ ತಿರುವಿನ ಬಳಿ ಕಾರು ಬಸ್ ಮಧ್ಯಭಾಗಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ #RoadAccident ಹೊಡೆತಕ್ಕೆ ಶಾಲಾ ಬಸ್ ಸಹ ಜಖಂಗೊಂಡಿದೆ.
ಘಟನೆ ನಡೆದ ಸಮಯದಲ್ಲಿ ಶಾಲಾ ಬಸ್’ನಲ್ಲಿ ವಿದ್ಯಾರ್ಥಿಗಳು ಇದ್ದಾರೆಯೇ ಎಂಬ ಬಗ್ಗೆ ಆತಂಕ ಉಂಟಾದರೂ, ಯಾವುದೇ ಮಕ್ಕಳು ಗಾಯಗೊಂಡಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಅದೃಷ್ಟವಶಾತ್ ಅಪಘಾತದಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಎಲ್ಲರಿಗೂ ನಿಟ್ಟುಸಿರು ಬಿಡುವಂತಾಗಿದೆ. ಘಟನೆ ಸಂಭವಿಸಿದ ವೇಳೆ ರಸ್ತೆಯಲ್ಲಿ ವಾಹನಗಳ ದಟ್ಟಣೆ ಇದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಅಪಘಾತದ ನಂತರ ಸ್ಥಳಕ್ಕೆ ಹುಳಿಮಾವು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣಗಳ ಕುರಿತು ತನಿಖೆ ಆರಂಭಿಸಲಾಗಿದ್ದು, ಕಾರು ಚಾಲಕನ ಅಜಾಗರೂಕ ಚಾಲನೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪಘಾತದಲ್ಲಿ ಹಾನಿಗೊಳಗಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿದ ಬಳಿಕ ಸಂಚಾರವನ್ನು ಸಹಜ ಸ್ಥಿತಿಗೆ ತರಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















