ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಂಬರುವ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್’ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ನೀಡಿದ್ದು, ಶಿವರಾತ್ರಿ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.
06503 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ವಿಜಯಪುರ #Vijayapura ಎಕ್ಸ್’ಪ್ರೆಸ್ ವಿಶೇಷ ರೈಲು 2026ರ ಫೆಬ್ರವರಿ 13 ರ ಶುಕ್ರವಾರ ರಾತ್ರಿ 07.15 ಕ್ಕೆ ಎಸ್’ಎಂವಿಟಿ ಬೆಂಗಳೂರಿನಿಂದ #Bengaluru ಹೊರಟು ಮರುದಿನ ಬೆಳಿಗ್ಗೆ 07.15 ಗಂಟೆಗೆ ವಿಜಯಪುರವನ್ನು ತಲುಪಲಿದೆ.
06504 ಸಂಖ್ಯೆಯ ವಿಜಯಪುರ – ಎಸ್’ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ ರೈಲು 2026 ರ ಫೆಬ್ರವರಿ 16ರ ಸೋಮವಾರ ಸಂಜೆ 05.30 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 06.30 ಗಂಟೆಗೆ ಎಸ್’ಎಂವಿಟಿ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಮಾರ್ಗದಲ್ಲಿ, ಈ ರೈಲುಗಳಿಗೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್’ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.
ಎಷ್ಟು ಬೋಗಿಗಳಿರುತ್ತವೆ?
ಈ ರೈಲು 22 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 02 ಎಸಿ 2-ಟೈರ್, 03 ಎಸಿ 3-ಟೈರ್, 11 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್’ಎಲ್’ಆರ್’ಡಿ ಬೋಗಿಗಳು ಇರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















