ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಹಾಗೂ ಮಹಾನಗರ ಪಾಲಿಕೆ, ನಗರಸಭೆ ಸೇರಿ ಇತರ ಸ್ಥಳೀಯ ಸಂಸ್ಥೆಗಳಿಗೂ ಶೀಘ್ರದಲ್ಲೇ ಚುನಾವಣೆ ನಡೆಸಲು ಕ್ರಮ ವಹಿಸಲಾಗುವುದು. ನಾನು ನಮ್ಮ, ಕಾರ್ಯಕರ್ತರ ಪ್ರಯತ್ನದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ #DCM D K Shivakumar ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಿದ್ಧರಿದ್ದೇವೆ. ಅದೇ ರೀತಿ ಐದು ಗ್ಯಾರಂಟಿ ಕುರಿತು ಮನೆಗೊಂದು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಸುಮಾರು 73 ಸಾವಿರ ಜನ ಇದರಲ್ಲಿ ಭಾಗವಹಿಸಿದ್ದಾರೆ. ಅದೇ ರೀತಿ ಮುಸ್ಲಿಮರಿಗೆ ಮೆಹಂದಿ, ಮಕ್ಕಳಿಗೆ ಚಿತ್ರಕಲೆ, ಯೋಗ ಸ್ಪರ್ಧೆ ನಡೆಯುತ್ತಿದೆ. ರಂಗೋಲಿ ಮೇಲೆ ಶೂ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಟ್ರೋಲ್ ಮಾಡಲು ಹಣ ಖರ್ಚು ಮಾಡುತ್ತಾರೆ ಎಂದರು.
ಸಚಿವ ಜಾರ್ಜ್ ರಾಜೀನಾಮೆ ವಿಚಾರ ನನಗೇನೂ ಗೊತ್ತಿಲ್ಲ:
ಇಂಧನ ಸಚಿವ ಸ್ಥಾನಕ್ಕೆ ಜಾರ್ಜ್ ರಾಜೀನಾಮೆ ನೀಡಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ವಿಪಕ್ಷ ನಾಯಕರು ಏನಾದರೊಂದು ಹೇಳುತ್ತಲೇ ಇರುತ್ತಾರೆ. ಯಾರೇ ಆದರೂ ಅಧಿಕಾರಿಗಳೊಂದಿಗೆ ಮಾತನಾಡುವುದರಲ್ಲಿ ತಪ್ಪೇನಿಲ್ಲ. ನಮ್ಮ ಕಾರ್ಯಕರ್ತರು ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಲೇ ಇರುತ್ತಾರೆ. ಆಗ ಅಧಿಕಾರಿಗಳಿಗೆ ನಾವು ಕೆಲವೊಂದು ಸೂಚನೆ ನೀಡಬೇಕಾಗುತ್ತದೆ. ಅದನ್ನು ಹೊರತುಪಡಿಸಿ ಇನ್ಯಾವುದೇ ರೀತಿಯ ಹಸ್ತಕ್ಷೇಪದ ವಿಚಾರ ನನಗೆ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















