ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫೆ.01 ರಿಂದ 07ರವರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆಯನ್ನು ನಡೆಸಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಫಾಸಲೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ #DC Prabhulinga Kavalikatti ಆದೇಶ ನೀಡಿದ್ದಾರೆ.
ಫೆ. 01 ರಿಂದ 07ರವರೆಗೆ ಬಿ.ಹೆಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಸ್ಕೂಲ್, ಫೆ. 02 ರಿಂದ 07ರವರೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಫೆ.01 ರಂದು ಗೋಪಿ ಸರ್ಕಲ್ ಹತ್ತಿರದ ಕಸ್ತೂರಿಬಾ ಬಾಲಿಕಾ ಪದವಿಪೂರ್ವ ಕಾಲೇಜು, ಫೆ. 02 ರಿಂದ 07ರವರೆಗೆ ವಿನೋಬನಗರದ ಶ್ರೀ ರಾಘವೇಂದ್ರ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆ ಈ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ಸಮಯದಲ್ಲಿ ಐದು ಮತ್ತು ಐದಕ್ಕಿಂತ ಹೆಚ್ದು ಜನರು ಸೇರುವುದನ್ನು ಹಾಗೂ ಮೊಬೈಲ್ ಬಳಕೆಯನ್ನು ನಿಷೇಧಿಸಿದೆ.
ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ದಿನದಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ತೆರೆಯುವುದನ್ನು ಪ್ರತಿಬಂಧಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















