ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಹಾರನಹಳ್ಳಿ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 5 ಲಕ್ಷ ಅನುದಾನ ಮಂಜೂರು ಮಾಡಿ ಈ ಅನುದಾನದ ಮೂಲಕ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ಉದ್ಘಾಟಿಸಿದರು.
ವಿಧಾನಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರು ನಾಗರಬಾವಿ ಗ್ರಾಮ ಠಾಣಾ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳಿಗೆ ಒಟ್ಟು 173 ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಿದರು. ಈ ಹಕ್ಕುಪತ್ರ ವಿತರಣಾ ಕಾರ್ಯಕ್ರಮವು ಅನೇಕ ವರ್ಷಗಳಿಂದ ನಿವೇಶನ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದ ಫಲಾನುಭವಿಗಳಿಗೆ ಕಾನೂನುಬದ್ಧ ಸ್ವಾಮ್ಯ ಹಕ್ಕು ಒದಗಿಸುವ ಮಹತ್ವದ ಹೆಜ್ಜೆಯಾಗಿದೆ.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಹಾಗೂ ಸಾಮಾನ್ಯ ನಾಗರಿಕರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುತ್ತಿರುವ ಡಿ.ಎಸ್. ಅರುಣ್ ಅವರು, ತಮ್ಮ ಸತತ ಹೋರಾಟ, ನಿರಂತರ ಪ್ರಯತ್ನ ಮತ್ತು ಜನಪರ ಕಾಳಜಿಯ ಫಲವಾಗಿ ಈ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಇದರಿಂದಾಗಿ ನಾಗರಬಾವಿ ಗ್ರಾಮ ಠಾಣಾ ವ್ಯಾಪ್ತಿಯ ಅನೇಕ ಕುಟುಂಬಗಳಿಗೆ ಶಾಶ್ವತ ನೆಲೆ ಮತ್ತು ಭದ್ರ ಭವಿಷ್ಯದ ಆಶಾವಾದ ಮೂಡಿದೆ.
ಈ ಮಹತ್ವದ ಕಾರ್ಯಕ್ರಮದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಡಿ.ಎಸ್. ಅರುಣ್ ಅವರ ಕಾರ್ಯವನ್ನು ಶ್ಲಾಘಿಸಿ, ಸಾರ್ವಜನಿಕ ಹಿತಕ್ಕಾಗಿ ಅವರು ಸಲ್ಲಿಸುತ್ತಿರುವ ಸೇವೆಯನ್ನು ಮೆಚ್ಚಿ ಸಂಕ್ಷಿಪ್ತವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಜೊತೆಗೆ ಮುಂದಿನ ದಿನಗಳಲ್ಲಿ ಕೂಡ ಗ್ರಾಮೀಣ ಅಭಿವೃದ್ಧಿ ಹಾಗೂ ಜನಸೇವೆಯ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಯಲಿ ಎಂಬುದೆ ನಮ್ಮ ಹಾರೈಕೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















