ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ರಾಷ್ಟ್ರೀಯ ಹೆದ್ದಾರಿ-206ರಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 128 ಮತ್ತು 2ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಬೀರೂರು-ತಾಳಗುಪ್ಪ #Talguppa ಹಾಗೂ ಅರಸೀಕೆರೆ-ಚಿಕ್ಕಜಾಜೂರು ನಡುವೆ ರೈಲ್ವೆ ‘ಲೈನ್ ಬ್ಲಾಕ್’ ಇರುವುದರಿಂದ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ನಿಗದಿತ ದಿನಗಳಲ್ಲಿ ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.
ಈ ಎಲ್ಲಾ ರೈಲುಗಳ ಸಂಚಾರ ರದ್ದು:
- ತುಮಕೂರು-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ #Shivamogga (16567) ಫೆಬ್ರವರಿ 16, 19, 23, 24 ಹಾಗೂ ಮಾರ್ಚ್ 2 ರಿಂದ 5ರವರೆಗೆ ಸಂಚರಿಸುವುದಿಲ್ಲ.
- ಶಿವಮೊಗ್ಗ ಟೌನ್-ತುಮಕೂರು ಎಕ್ಸ್’ಪ್ರೆಸ್ (16568) ರೈಲು ಫೆಬ್ರವರಿ 17, 20, 24, 25 ಹಾಗೂ ಮಾರ್ಚ್ 3 ರಿಂದ 6ರವರೆಗೆ ರದ್ದಾಗಲಿದೆ.
- ಹುಬ್ಬಳ್ಳಿ-ಅರಸೀಕೆರೆ ಎಕ್ಸ್’ಪ್ರೆಸ್ (16214) ಫೆ. 23, 24 ಹಾಗೂ ಅರಸೀಕೆರೆ-ಹುಬ್ಬಳ್ಳಿ ಎಕ್ಸ್’ಪ್ರೆಸ್ (16213) ಫೆ. 24, 25 ರಂದು ರದ್ದಾಗಿವೆ.
- ಕೆಎಸ್’ಆರ್ ಬೆಂಗಳೂರು-ಶಿವಮೊಗ್ಗ-ಕೆಎಸ್’ಆರ್ ಬೆಂಗಳೂರು #Bengaluru ಜನಶತಾಬ್ದಿ ಎಕ್ಸ್’ಪ್ರೆಸ್ (12089/12090) ರೈಲುಗಳು ಫೆಬ್ರವರಿ 24 ಮತ್ತು 25 ರಂದು ರದ್ದಾಗಿವೆ.
ತಡವಾಗಿ ಹೊರಡುವ ರೈಲುಗಳು
- ಶಿವಮೊಗ್ಗ-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ (12090) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಶಿವಮೊಗ್ಗದಿಂದ 75 ನಿಮಿಷ ತಡವಾಗಿ ಹೊರಡಲಿದೆ.
- ಅರಸೀಕೆರೆ-ಹುಬ್ಬಳ್ಳಿ ರೈಲು (16213) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಅರಸೀಕೆರೆಯಿಂದ ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಪ್ರಯಾಣ ಆರಂಭಿಸಲಿದೆ.
ಈ ರೈಲುಗಳ ನಿಯಂತ್ರಣ
- ಫೆಬ್ರವರಿ 25 ರಂದು ಕೆಎಸ್’ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್’ಪ್ರೆಸ್ (20661) ಮಾರ್ಗಮಧ್ಯೆ 35 ನಿಮಿಷ ನಿಯಂತ್ರಣವಾಗಲಿದೆ.
- ತಾಳಗುಪ್ಪ- ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ (20652) ಫೆ. 24 ಮತ್ತು 25 ರಂದು 75 ನಿಮಿಷಗಳ ಕಾಲ ಹಾಗೂ ಚಿಕ್ಕಮಗಳೂರು-ಶಿವಮೊಗ್ಗ ಪ್ಯಾಸೆಂಜರ್ (56272) ರೈಲು ಅರ್ಧ ಗಂಟೆ ಕಾಲ ಮಾರ್ಗಮಧ್ಯೆ ವಿಳಂಬವಾಗಿ ಸಂಚರಿಸಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















