ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲ್ಲೂಕಿನ ಕಾನ್ಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡುಹಗಲೆ ಮನೆ ಕಳ್ಳತನ ಮಾಡಿದ್ದ ಖದೀಮನನ್ನು ಗ್ರಾಮಸ್ಥರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.
ಹೊಂಕೇರಿ ಗ್ರಾಮದ ರೈತರೊಬ್ಬರ ಮನೆಗೆ ನುಗ್ಗಿದ ಕಳ್ಳ, ಬೆಲ್ಲ ಹಾಗೂ ಫಸಲು ಮಾರಿ ಬಂದ 50ಸಾವಿರ ರೂಪಾಯಿ ನಗದು ಹಣವನ್ನು ಕಪಾಟಿನಲ್ಲಿ ಇರಿಸಿದ್ದರು. ಮನೆಯಲ್ಲಿದ್ದವರು ಜಮೀನು ಕೆಲಸಕ್ಕೆ ಹೋಗಿದ್ದನ್ನು ಗಮನಿಸಿದ ಕಳ್ಳ ಮನೆ ಬಾಗಿಲು ಮುರಿದು ಒಳಗೆ ನುಗ್ಗಿದ್ದಾನೆ ಎನ್ನಲಾಗಿದೆ.
ಮನೆಯೊಳಗೆ ಇದ್ದ 50 ಸಾವಿರ ನಗದು, ಚಿನ್ನಾಭರಣೆ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಸಿಕ್ಕಿಬಿದ್ದ ಕಳ್ಳನನ್ನು ಲಗೇಜ್ ಆಟೋದಲ್ಲಿ ಮೆರವಣಿಗೆ ಮಾಡಿ, ನಂತರ ಪೊಲೀಸರ ಕೈಗೆ ಒಪ್ಪಿಸಿದ್ದಾರೆ. ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳ ತನ್ನ ಹೆಸರು, ಊರು ಯಾವುದನ್ನು ಕೇಳಿದರೂ ಬಾಯಿ ಬಿಡುತ್ತಿಲ್ಲ. ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















