ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಹಾಶಿವರಾತ್ರಿ #Mahashivaratri ಅಂಗವಾಗಿ ಇಲ್ಲಿನ ಹೊಸಮನೆಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಈಶ್ವರನಿಗೆ ವಿಶೇಷ ಅಭಿಷೇಕ, ಪೂಜೆ ಅದ್ದೂರಿಯಾಗಿ ನಡೆಯಿತು.
ಶಿವರಾತ್ರಿ ಅಂಗವಾಗಿ ಮುಂಜಾನೆಯಿಂದಲೇ ದೇವರಿಗೆ ವಿಶೇಷ ಅಭಿಷೇಕ, ಪೂಜಾ ವಿಧಿವಿಧಾನಗಳು ನಡೆದವು.
ಪ್ರಧಾನ ಅರ್ಚಕರಾದ ಸಂತೋಷ್ ಅವರ ನೇತೃತ್ವದಲ್ಲಿ ಈಶ್ವರನಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ, ಮಹಾ ಮಂಗಳಾರತಿ ಪೂಜೆ ಜರುಗಿತು. ಭಕ್ತರಿಗೆ ತೀರ್ಥ ಪ್ರಸಾದ, ಪಾನಕ ಕೋಸಂಬರಿ ವಿತರಿಸಲಾಯಿತು.
ಭಾನುವಾರ ಮುಂಜಾನೆಯಿಂದ ಸೋಮವಾರ ಮುಂಜಾನೆಯವರೆಗೂ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಕೃತಾರ್ಥರಾದರು.
ದೇವಸ್ಥಾನದ ಅಧ್ಯಕ್ಷರಾದ ಜಿ. ಆನಂದ್, ಶಾಸಕರಾದ ಬಿ.ಕೆ. ಸಂಗಮೇಶ್ವರ, ನಗರಸಭೆಯ ಸದಸ್ಯರಾದ ಮಣಿ, ಸುದೀಪ್ ಕುಮಾರ್, ಚನ್ನಪ್ಪ, ಮಂಜುನಾಥ್ ಟೀಕು, ಮಂಜು, ಹೊಸಮನೆ ರಂಗನಾಥ ರಂಗಣ್ಣ ಹಾಗೂ ದೇವಸ್ಥಾನದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















