ಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ |
ಜಾವಗಟ್ಟಿ ಗ್ರಾಮದಲ್ಲಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರನ್ನು ಬಸವನಂದಿಹಳಿ ಮಲ್ಲಿಕಾರ್ಜುನಪ್ಪ ಕಂಡೇರ (56) ಎಂದು ಗುರುತಿಸಲಾಗಿದೆ.
ಘಟನೆ ಹೇಗಾಯ್ತು?
ಪತ್ನಿ ಪಾರ್ವತಮ್ಮ ಅವರ ಜೊತೆ ಶಿರಾಳಕೊಪ್ಪದಿಂದ ಸೊರಬ ತಾಲ್ಲೂಕಿನ ಗಂಗೊಳ್ಳಿಯಲ್ಲಿದ್ದ ಮಗಳ ಮನೆಗೆ ಹೊರಟಿದ್ದಾರೆ. ಈ ವೇಳೆ ಎದುರಿಗೆ ಬಂದ ಟ್ರಾಕ್ಟರ್ ಚಾಲಕ ಮಾಳೂರಿಗೆ ತೆರಳುವ ರಸ್ತೆಯ ಬಲಕ್ಕೆ ಸಂಚರಿಸಿದ್ದು, ಪರಿಣಾಮವಾಗಿ ಬೈಕ್’ಗೆ ಡಿಕ್ಕಿಯಾಗಿದೆ. ಇದರಿಂದಾಗಿ ಸವಾರನ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿಗೆ ಗಾಯಗಳಾಗಿದ್ದು, ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಶಿರಾಳಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















