ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಸ್ನೇಹಿತರ ಜೊತೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಸಾವು ಕಂಡಿರುವ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ.
ಪಟ್ಟಣದ ಕುಶಾವತಿ ಬಳಿಯ ನದಿಯ ಸಮೀಪ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದ ತೇಜಸ್ವಿ (19) ಮೃತ ವಿದ್ಯಾರ್ಥಿ. ತೇಜಸ್ವಿ ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಬಿ ಕಾಂ ವ್ಯಾಸಂಗ ಮಾಡುತ್ತಿದ್ದ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ನಂತರ ಮುಳುಗು ತಜ್ಞ ಪ್ರಮೋದ್ ಪೂಜಾರಿ ಮೃತದೇಹ ಹೊರ ತೆಗೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















