No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2026
in ಶಿವಮೊಗ್ಗ
0
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತಿಹಾಸ ಮತ್ತು ಪುರಾಣ ಪ್ರಸಿದ್ಧವಾದ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯು #Kote Shri Marikamba Fair ಫೆ.24ರಿಂದ 28ರ ವರೆಗೆ ಐದು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಹೇಳಿದರು.

ಅವರು ಇಂದು ದೇವಸ್ಥಾನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಕೋಟೆ ಮಾರಿಕಾಂಬ ದೇವಸ್ಥಾನವು ಇತಿಹಾಸ ಪ್ರಸಿದ್ಧವಾಗಿದೆ. ಕೆಳದಿ ಶಿವಪ್ಪನಾಯಕ ಅರಸರ ಕಾಲದಿಂದಲೂ ಈ ಹಬ್ಬ ಇಂದಿನವರೆಗೆ ಪ್ರತೀ ಎರಡು ವರ್ಷಕ್ಕೊಮ್ಮೆ ಅತ್ಯಂತ ಸಡಗರ-ಸಂಭ್ರಮದಿಂದ ಭಾವೈಕ್ಯತೆಯಿಂದ ಎಲ್ಲಾ ಸಮಾಜದ ಸಹಕಾರದೊಂದಿಗೆ ಆಚರಿಸುತ್ತಾ ಬಂದಿದ್ದು, ರಾಜ್ಯದಲ್ಲಿಯೇ ಅತ್ಯಂತ ಹೆಸರುವಾಸಿಯಾಗಿದೆ ಎಂದರು.
ಈ ಹಬ್ಬವು ಫೆ.24ರಿಂದ ಆರಂಭಗೊಳ್ಳುತ್ತದೆ. ಅಂದು ಮಂಗಳವಾರ ಬೆಳಿಗ್ಗೆ 5 ಗಂಟೆಗೆ ಸಮಿತಿವತಿಯಿಂದ ಮಂಗಳವಾದ್ಯದೊಂದಿಗೆ ಬಿ.ಬಿ. ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಗುತ್ತದೆ. ಆ ಸಮಾಜದ ಮುತ್ತೈದೆಯರು ಮಂಗಳ ದ್ರವ್ಯಾದಿಗಳೊಂದಿಗೆ ಮೆರವಣಿಗೆಯಲ್ಲಿ ಬಾಸಿಂಗದೊಡನೆ ಗಾಂಧಿಬಜಾರಿನ ತವರು ಮನೆಯಲ್ಲಿರುವ ಶ್ರೀ ಮಾರಿಕಾಂಬೆಗೆ ಉಡಿ ತುಂಬಿ ಪೂಜೆ ಸಲ್ಲಿಸುತ್ತಾರೆ. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದವರು ವಿಸರ್ಜನಾ ಮೂರ್ತಿಗೆ ಮಾಂಗಲ್ಯಧಾರಣೆ ಮಾಡಿ, ಸಾರ್ವಜನಿಕವಾಗಿ ಪೂಜೆಯನ್ನು ಆರಂಭಿಸುತ್ತಾರೆ. ಮಂಗಳವಾರ ರಾತ್ರಿ 9 ಗಂಟೆಯವರೆಗೂ ಲಕ್ಷಾಂತರ ಮುತ್ತೈದೆಯರು ಶ್ರೀ ಮಾರಿಕಾಂಬೆಗೆ ಮಡಿಲಕ್ಕಿ ನೀಡಿ, ಉಡಿತುಂಬಿ ಪೂಜೆ ಸಲ್ಲಿಸುತ್ತಾರೆ. ನಂತರ ಮಾರಿಕಾಂಬೆಯನ್ನು ರಥದಲ್ಲಿ ಕೂರಿಸಿ ಮೆರವಣಿಗೆಯನ್ನು ಉಪ್ಪಾರ ಸಮಾಜದವರು ಗದ್ದುಗೆಗೆ ತರುತ್ತಾರೆ. ಇದರ ಮಧ್ಯೆ ಗಂಗಾಪರಮೇಶ್ವರಿ ದೇವಸ್ಥಾನದಿಂದ ಗಂಗಾಮತ ಸಮಾಜದವರು ಗಂಗೆಪೂಜೆಯೊಂದಿಗೆ ಅಮ್ಮನವರನ್ನು ಮಂಗಳವಾದ್ಯದೊಂದಿಗೆ ಎದುರುಗೊಂಡು ಪೂಜೆ ಸಲ್ಲಿಸುತ್ತಾರೆ ಎಂದರು.

ಗಾಂಧಿಬಜಾರಿನಲ್ಲಿ ಅಮ್ಮನವರನ್ನು ಪ್ರತಿಷ್ಠಾಪನೆ ಮಾಡಿದಾಗ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲಿ ಜಾಗ ತುಂಬಾ ಕಡಿಮೆ ಇರುವುದರಿಂದ ನೂಕು-ನುಗ್ಗಲು ಆಗದಂತೆ ಎಚ್ಚರಿಕೆ ವಹಿಸಲಾಗುವುದು. ಅಂಗವಿಕಲರಿಗೆ, ವಯಸ್ಸಾದವರಿಗೆ ವಿಶೇಷ ಮಾರ್ಗವನ್ನು ಕಲ್ಪಿಸಲಾಗುವುದು. ಭಕ್ತಾಧಿಗಳಿಗೆ ಮಡಿಲಕ್ಕಿ, ಸೀರೆ ತೆಗೆದುಕೊಳ್ಳಲು ವ್ಯವಸ್ಥಿತವಾಗಿ ಅವಕಾಶ ಕಲ್ಪಿಸಲಾಗುವುದು. ಎಲ್ಲಾ ಕಡೆ ಸಿಸಿ ಟಿ.ವಿಯನ್ನು ಅಳವಡಿಸಲಾಗುವುದು ಎಂದರು.
ಬುಧವಾರ ಬೆಳಿಗ್ಗೆ 4ಗಂಟೆಗೆ ಹರಿಜನ ಸಮಾಜದವರು ಅಂದರೆ ವಿದ್ಯಾನಗರದ ಕರ್ಲಟ್ಟಿ ಬಾಂಧವರು ಬೇವಿನುಡಿಗೆಯೊಂದಿಗೆ ಆಗಮಿಸಿ, ಮಾರಿಕಾಂಬೆಗೆ ಪೂಜೆ ಸಲ್ಲಿಸಿದ ನಂತರ ಅಮ್ಮನವರನ್ನು ಗದ್ದುಗೆಯಲ್ಲಿ ಕೂರಿಸಲಾಗುತ್ತದೆ. ನಂತರ ಕುರುಬ ಸಮಾಜದ ಚೌಡಿಕೆ ಕುಟುಂಬದವರು ದೇವಿಗೆ ನೈವೇದ್ಯಮಾಡಿ ಪೂಜೆ ಸಲ್ಲಿಸುತ್ತಾರೆ. ಅಂದು ಬೆಳಿಗ್ಗೆ 6 ರಿಂದ ರಾತ್ರಿ 10:30ರವರೆಗೂ ವಾಲ್ಮೀಕಿ, ಉಪ್ಪಾರ, ಮಡಿವಾಳ ಸಮಾಜದವರು ಪೂಜೆ ಸಲ್ಲಿಸುತ್ತಾರೆ. ಈ ಪೂಜೆಯು ಸರದಿಯಂತೆ ನಾಲ್ಕು ದಿನಗಳ ಕಾಲವೂ ನಡೆಯುತ್ತದೆ ಎಂದರು.

ಫೆ.28ರ ರಾತ್ರಿ 7ಗಂಟೆಗೆ ಶ್ರೀ ಮಾರಿಕಾಂಬೆಯ ಉತ್ಸವ ವಿವಿಧ ಜಾನಪದ ಕಲಾತಂಡಗಳ ಮೆರಗಿನೊಂದಿಗೆ ಲಕ್ಷಾಂತರ ಜನರ ಮತ್ತು ಭಕ್ತರ ಅತ್ಯಂತ ಸಂಭ್ರಮದಿಂದ ವನಪ್ರವೇಶಕ್ಕೆ ಕಳಿಸಿಕೊಡುವ ಮೂಲಕ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ತೆರೆ ಎಳೆಯಲಾಗುತ್ತದೆ. ಮಡಿವಾಳ ಸಮಾಜದವರು ಅಮ್ಮನವರನ್ನು ಮಧ್ಯರಾತ್ರಿ ವನಕ್ಕೆ ತೆಗೆದುಕೊಂಡು ಹೋಗಿ ಅಂತಿಮವಾಗಿ ಸಮಾಜದ ಸಂಪ್ರದಾಯದಂತೆ ಶಾಸ್ತ್ರವನ್ನು ನಡೆಸಿ, ಪೂಜೆ ಸಲ್ಲಿಸಿ ವನದಿಂದ ಹಿಂದಿರುಗುತ್ತಾರೆ ಎಂದು ಹಬ್ಬದ ವಿಶೇಷತೆಗಳನ್ನು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಮತ್ತಷ್ಟು ವಿವರಣೆ ನೀಡಿ, ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹಬ್ಬದ ಹಿನ್ನಲೆಯಲ್ಲಿ ಫೆ.24ರಿಂದ 27ರ ವರೆಗೆ ಈ ಬಾರಿ ಗಾಂಧಿಬಜಾರಿನ ರಾಮಣ್ಣ ಶ್ರೇಷ್ಠಿ ಪಾರ್ಕಿನಲ್ಲಿ ಪ್ರತಿದಿನ ಸಂಜೆ 5ರಿಂದ 9.30ರ ವರೆಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ.24ರಂದು ಶಿವಮೊಗ್ಗದ ಝೇಂಕಾರ್ ಮೇಲೋಡೀಸ್‌ನಿಂದ ಸುಗಮ ಸಂಗೀತ, ಫೆ.25ರಂದು ಮನು ಕಲಾಕೇಂದ್ರದವರಿಂದ ಭರತನಾಟ್ಯ, ಶಾಂತ ಆನಂದ್ ಅವರಿಂದ ಸುಗಮ ಸಂಗೀತ, 26ರಂದು ಕೂಡ ಶ್ವೇತಾ ಪ್ರಕಾಶ್ ಮತ್ತು ನಾಗರತ್ನ ಸಂಗಡಿಗರಿಂದ ಕಾರ್ಯಕ್ರಮ ವಿಶೇಷವಾಗಿ ಫೆ.27ರಂದು ಸುರೇಖಾ ಹೆಗಡೆ, ಶಶಿಕಿರಣ್ ಹಾಗೂ ದೂರದರ್ಶನ ಕಲಾವಿದರಿಂದ ಸವಿನೆನಪು ಎಂಬ ಹಳೆಯ ಚಿತ್ರಗೀತೆಗಳ ಕಾರ್ಯಕ್ರಮ ನಡೆಯಲಿದೆ ಎಂದರು.
ಇದಾದ ಮೇಲೆ ಮಾರಿಕಾಂಬ ಜಾತ್ರೆಯ ಪ್ರಯುಕ್ತ ಮಾರ್ಚ್ 6ರಿಂದ ಮಾರ್ಚ್8ರ ವರೆಗೆ ನೆಹರೂ ಕ್ರೀಡಾಂಗಣದಲ್ಲಿ ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ ಕುಸ್ತಿ ಪಂದ್ಯಾವಳಿಗಳು ನಡೆಯಲಿವೆ. ಈ ಪಂದ್ಯಾವಳಿ ರಾಷ್ಟ್ರಮಟ್ಟದ್ದಾಗಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದ ಪೈಲ್ವಾನರುಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಇದಕ್ಕಾಗಿ ಕುಸ್ತಿ ಸಮಿತಿಯನ್ನು ರಚಿಸಲಾಗಿದೆ. ಅವರು ಈ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷರುಗಳಾದ ಎನ್. ಉಮಾಪತಿ, ಎಂ.ಕೆ. ಸುರೇಶ್‌ಕುಮಾರ್, ಕೋಶಾಧ್ಯಕ್ಷ ಹೆಚ್.ವಿ. ತಿಮ್ಮಪ್ಪ, ಕಾರ್ಯದರ್ಶಿಗಳಾದ ಎಸ್. ಹನುಮಂತಪ್ಪ, ಡಿ.ಎಂ. ರಾಮಯ್ಯ, ಎಸ್.ಸಿ. ಲೋಕೇಶ್, ಸಹಕಾರ್ಯದರ್ಶಿಗಳಾದ ಸೀತಾರಾಮ್‌ನಾಯಕ್, ಎ.ಹೆಚ್. ಸುನೀಲ್, ಟಿ.ಎಸ್. ಚಂದ್ರಶೇಖರ್, ಪೂಜಾ ಸಂಚಾಲಕರುಗಳಾದ ಸತ್ಯನಾರಾಯಣ್, ಪಿ.ಸಿ. ಲಿಂಗರಾಜ್, ಎಸ್.ಜಿ. ಪ್ರಭಾಕರ್, ನಿರ್ದೇಶಕರುಗಳಾದ ಎನ್. ಶ್ರೀಧರಮೂರ್ತಿ ನವುಲೆ, ಎಲ್. ಚಂದ್ರಶೇಖರ್, ವಿ.ರಾಜು, ಹೆಚ್.ಬಿ. ಪ್ರಕಾಶ್, ಹೆಚ್.ಟಿ. ವಾಸುದೇವ್, ಎಸ್.ಜಿ. ತುಕ್ಕೋಜಿರಾವ್, ಎನ್. ಶ್ರೀಧರ್ ನಾಡಿಗ್, ಎಸ್. ಶಿವು, ಎಸ್.ಸುಧೀರ್, ಸೋಮಶೇಖರ್ ನಾಡಿಗ್, ಹರೀಶ್‌ಲಾಲ್, ಪ್ರಮುಖರಾದ ಕೆ.ವಿ. ಅಣ್ಣಪ್ಪ, ಮಂಜುನಾಥ್‌ ಬಾಬು ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKote Shri Marikamba fairLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೋಟೆ ಶ್ರೀ ಮಾರಿಕಾಂಬ ಜಾತ್ರೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Previous Post

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

Next Post

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | 'ಡಂಗುರ' ಪ್ರಚಾರಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL