ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಫೆಬ್ರವರಿ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ “ಸುವರ್ಣ ಸಂಭ್ರಮ” ಹಾಗೂ “ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ”ಕ್ಕೆ #State-level educational conference ಆಗಮಿಸುವಂತೆ ಸಂಘದ ಪದಾಧಿಕಾರಿಗಳ ನಿಯೋಗವು ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್, ಮಧು ಬಂಗಾರಪ್ಪನವರನ್ನು #Minister Madhu Bangarappa ಭೇಟಿ ಮಾಡಿ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದರು.
ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಲಿ, ರಾಜ್ಯ ಉಪಾಧ್ಯಕ್ಷ ಮಾರುತೇಶ ಆರ್, ಬೆಳಗಾವಿ ಜಿಲ್ಲಾಧ್ಯಕ್ಷ ಜಯಕುಮಾರ್ ಹೆಬ್ಬಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ್ ಗೋಣಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















