ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೆಂಗಳೂರು |
ಜಿಲ್ಲೆಯ ಕುಂಸಿ ಹಾಗೂ ಅರಸಾಳು ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ #Railway Department ಮತ್ತೊಮ್ಮೆ ಗುಡ್ ನ್ಯೂಸ್ #GoodNews ನೀಡಿದ್ದು, ಎರಡು ರೈಲುಗಳ ನಿಲುಗಡೆಯನ್ನು ಮತ್ತೊಮ್ಮೆ ಮುಂದುವರೆಸಿದೆ.
ಹೌದು, ಪ್ರಯಾಣಿಕರ ಅನುಕೂಲಕ್ಕಾಗಿ ಕುಂಸಿ ಹಾಗೂ ಅರಸಾಳು ನಿಲ್ದಾಣಗಳಲ್ಲಿ ಎರಡು ರೈಲುಗಳ ನಿಲುಗಡೆಯನ್ನು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ವಿಸ್ತರಿಸಿದೆ.
ಯಾವ ಎರಡು ರೈಲುಗಳು?
ಪ್ರಯಾಣಿಕರ ಅನುಕೂಲಕ್ಕಾಗಿ, 16227/16228 ಸಂಖ್ಯೆಯ ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ.
ಸಂಖ್ಯೆ 16205/16206 ಸಂಖ್ಯೆಯ ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್’ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.
ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















