ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21ರಂದು ಉದ್ಯೋಗ ಮೇಳ #Job Fair ಆಯೋಜಿಸಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 11ಗಂಟೆಗೆ ಉದ್ಯೋಗ ಮೇಳ ನಡೆಯಲಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9901914601 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















