No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಉದ್ಯೋಗ ಪಡೆದು ಕನಸು ನನಸಾಗಿಸಿಕೊಳ್ಳಿ: ಸಂಸದ ರಾಘವೇಂದ್ರ ಆಶಯ

ಶಿಕಾರಿಪುರ | ಬಿ. ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಬೃಹತ್ ಉದ್ಯೋಗ ಮೇಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2026
in ಶಿಕಾರಿಪುರ
0
ಉದ್ಯೋಗ ಪಡೆದು ಕನಸು ನನಸಾಗಿಸಿಕೊಳ್ಳಿ: ಸಂಸದ ರಾಘವೇಂದ್ರ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಉದ್ಯೋಗ ಅಪೇಕ್ಷಿತರು ತಮ್ಮ ಬಗ್ಗೆ ವಿಶ್ವಾಸವನ್ನು ಇಟ್ಟುಕೊಂಡು ಉದ್ಯೋಗವನ್ನು ಪಡೆದುಕೊಂಡು ಹೋಗುವ ಕನಸಿನೊಂದಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದೀರಾ ಆ ಕನಸನ್ನು ನನಸು ಮಾಡಲು ಈ ಉದ್ಯೋಗ ಮೇಳ #Job Fair ಸಹಕರಿಸುತ್ತದೆ ಎಂದು ಸಂಸದ ಬಿ. ವೈ. ರಾಘವೇಂದ್ರ #MP B Y Raghavendra ತಿಳಿಸಿದರು.

ನಗರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ #B S Yadiyurappa ಜನ್ಮದಿನದ ಅಂಗವಾಗಿ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಮತ್ತು ಆಳ್ವಾಸ್ ವಿದ್ಯಾ ಸಂಸ್ಥೆಯ #Alwas Educational Institute ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಶಿಕಾರಿಪುರ ಉದ್ಯೋಗ ಮೇಳ 2026 ಉದ್ಘಾಟಿಸಿ ಮಾತನಾಡಿ, ಇಂದು ಯುವಕರಲ್ಲಿ ಕೌಶಲ್ಯಗಳ ಕೊರತೆಯಿಂದ ಉದ್ಯೋಗವನ್ನು ಪಡೆದುಕೊಳ್ಳಲು ಹಿನ್ನಡೆಯಾಗುತ್ತಿದೆ. ಕೌಶಲ್ಯಗಳ ಬಗ್ಗೆ ತರಬೇತಿಯನ್ನು ಪಡೆದು ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಇತ್ತೀಚೆಗೆ ಉದ್ಯೋಗ ನೀಡುವ ಕಂಪನಿಗಳು ಉದ್ಯೋಗಿಗಳಿಗೆ ನಿರೀಕ್ಷಿತ ವೇತನ ಮತ್ತು ಮೂಲಭೂತ ಸೌಕರ್ಯಗಳನ್ನು ನೀಡದೇ ಇರುವುದರಿಂದ ಗ್ರಾಮೀಣ ಭಾಗದ ಉದ್ಯೋಗಿಗಳು ನಗರ ಪ್ರದೇಶದಲ್ಲಿ ಉದ್ಯೋಗ ಮಾಡಲು ಹಿಂಜರಿಯುತ್ತಿದ್ದಾರೆ. ಇಲ್ಲಿ ಬಂದಿರುವ ಕಂಪನಿಗಳು ಉದ್ಯೋಗ ಆಕಾಂಕ್ಷಿಗಳಿಗೆ ಒಬ್ಬ ವ್ಯಕ್ತಿ ಗೌರವದಿಂದ ಜೀವನ ನಡೆಸಲು ಬೇಕಾದಷ್ಟಾದರೂ ವೇತನವನ್ನು ನೀಡಬೇಕು. ಆ ನಿಟ್ಟಿನಲ್ಲಿ ಕಂಪನಿಗಳ ಮುಖ್ಯಸ್ಥರು ಗಮನಿಸಬೇಕು ಎಂದರು.

ಶಾಹಿ ಗಾರ್ಮೆಂಟ್ಸ್ ನಂತಹ ಕಂಪನಿಗಳು ಶಿವಮೊಗ್ಗ ಜಿಲ್ಲೆಗೆ ಬರಲು ನಮ್ಮ ತಂದೆ ಯಡಿಯೂರಪ್ಪನವರ ಶ್ರಮ ಅಪಾರವಾದದ್ದು, ಸ್ಥಳೀಯರಿಗೆ ಸ್ಥಳೀಯವಾಗಿ ಉದ್ಯೋಗ ದೊರೆತು, ಅವರ ಜೀವನ ಆರ್ಥಿಕವಾಗಿ ಸುಧಾರಿಸಬಹುದು ಎಂದು ತಿಳಿದು ವಿವಿಧ ಕಂಪನಿಗಳನ್ನು ಜಿಲ್ಲೆಗೆ ಬರಮಾಡಿಕೊಂಡು ಅವರಿಗೆ ಬೇಕಾದ ಮೂಲಭೂತ ಸೌಕರ್ಯ ನೀಡಿದ್ದರಿಂದ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಪಡೆದುಕೊಳ್ಳಲು ಸಹಕಾರಿಯಾಗಿದೆ. ಪ್ರಧಾನ ಮಂತ್ರಿಗಳ ವಿಕಸಿತ ಭಾರತ 2047 ಕನಸನ್ನು ನನಸು ಮಾಡುವ ಶಕ್ತಿ ಯುವ ಸಮಾಜದಲ್ಲಿದೆ ಆ ನಿಟ್ಟಿನಲ್ಲಿ ಯುವಕರು ಮುನ್ನಡೆಯಬೇಕೆಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ, ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ನೀಡಬೇಕೆಂಬ ಆಸೆ ಈ ದಿನ ನನಸಾಗಿದೆ. ಸ್ಥಳೀಯ ಪ್ರತಿಭೆಗಳಿಗೆ ಉದ್ಯೋಗ ನೀಡುವುದು ಈ ಉದ್ಯೋಗ ಮೇಳದ ಉದ್ದೇಶವಾಗಿದೆ ಎಂದರು.
ನಮ್ಮ ತಂದೆಯವರಿಗೆ ರಾಜಕೀಯ ಜೀವನ ಕೊಟ್ಟ ಶಿಕಾರಿಪುರ ಕ್ಷೇತ್ರಕ್ಕೆ ಶಿಕ್ಷಣ, ಆರೋಗ್ಯ, ಕೃಷಿ, ರಸ್ತೆ,ನೀರಾವರಿ ,ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಹೀಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಕ್ರಾಂತಿಯನ್ನೇ ಮಾಡಿದ್ದಾರೆ. ಕರ್ನಾಟಕದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗಿಂತ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಎಲ್ಲಾ ರೀತಿಯ ಅಭಿವೃದ್ಧಿಗಳನ್ನು ಹೊಂದಿದೆ ಇದು ಈ ಕ್ಷೇತ್ರದ ವಿಶೇಷತೆ. ನಮ್ಮ ಕುಟುಂಬದ ರಾಜಕೀಯ ಬೆಳವಣಿಗೆಗೆ ಸಹಕರಿಸಿದ ಮತದಾರ ಬಾಂಧವರ ಮಕ್ಕಳಿಗೆ ಉದ್ಯೋಗ ಒದಗಿಸುವುದು ನನ್ನ ಕನಸಾಗಿತ್ತು ಈ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು.

ವಿವೇಕ್ ಆಳ್ವಾರವರು ಕಳೆದ ಎರಡು ತಿಂಗಳಿನಿಂದ ಈ ಉದ್ಯೋಗ ಮೇಳದ ಉದ್ಯೋಗ ಆಕಾಂಕ್ಷಿಗಳಿಗೆ ಮಾಹಿತಿ ಶಿಬಿರಗಳನ್ನು ಏರ್ಪಡಿಸುವುದರ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಉದ್ಯೋಗ ಪಡೆಯುವ ಯುವಕರು ಸಿಕ್ಕಂತಹ ಅವಕಾಶ ಕೈ ಚೆಲ್ಲದೆ, ಅವಕಾಶ ಬಳಸಿಕೊಂಡರೆ ತಮ್ಮ ಅನುಭವದ ಮೂಲಕ ಮುಂದೆ ಉನ್ನತವಾದ ಸಾಧನೆಯನ್ನು ಮಾಡಬಹುದು ಎಂದರು.

ಯಾವುದೇ ರೀತಿಯ ತಪ್ಪು ಆಲೋಚನೆ ಮಾಡದೆ ಸಿಕ್ಕ ಕೆಲಸವನ್ನು ಮನಸ್ಪೂರ್ವಕವಾಗಿ ಸ್ವೀಕರಿಸಿ ಈ ಉದ್ಯೋಗ ಮೇಳದ ಸದೂಪಯೋಗ ಪಡೆದುಕೊಂಡು ಸ್ವಾವಲಂಬಿಯ ಜೀವನವನ್ನು ನಡೆಸಬೇಕು. ನಿಮ್ಮ ಉತ್ತಮ ಜೀವನವನ್ನು ಕಂಡು ಪೋಷಕರು ಎಷ್ಟು ಸಂತೋಷ ಪಡುತ್ತಾರೋ ಅಷ್ಟೇ ಸಂತೋಷವನ್ನು ನಾನು ಮತ್ತು ನಮ್ಮ ಕುಟುಂಬದವರು ಸಂತೋಷ ಪಡುತ್ತೇವೆ. ಪ್ರಧಾನ ಮಂತ್ರಿಗಳು ತಮ್ಮನ್ನು ಪ್ರಧಾನ ಸೇವಕನೆಂದು ತಿಳಿದು ತಮ್ಮ ಕಾರ್ಯಗಳನ್ನು ಮಾಡುವುದರ ಮೂಲಕ ಎಲ್ಲಾ ಕ್ಷೇತ್ರದಲ್ಲೂ ಭಾರತವನ್ನು ಅಭಿವೃದ್ಧಿಯ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಇದರ ಪ್ರತಿಫಲವಾಗಿ ಭಾರತಕ್ಕೆ 25 ಕ್ಕೂ ದೇಶಗಳಿಂದ ಉನ್ನತ ಸಾರ್ವಜನಿಕ ಪುರಸ್ಕಾರಗಳು ಲಭಿಸಿವೆ. ಪ್ರಸ್ತುತ ಆಯವ್ಯಯದಲ್ಲಿ ಒಂದು ಲಕ್ಷ ಕೋಟಿ ಹಣವನ್ನ ಖಾಸಗಿ ಕಂಪನಿಗಳಿಗೆ ಬಡ್ಡಿ ರಹಿತ ವಾಗಿ ಸಾಲವನ್ನು ಕೊಡಲು ಮೀಸಲಿಟ್ಟಿದ್ದಾರೆ. ಅಲ್ಲದೆ ಇಂದು ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚು ಮಹತ್ವ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ವಿವೇಕ ಆಳ್ವ, ಸಂಸದರು ಮತ್ತು ಸ್ಥಳೀಯ ಶಾಸಕರ ಕನಸಿನ ಈ ಉದ್ಯೋಗ ಮೇಳ ಯಶಸ್ವಿಯಾಗಲು ,ತಾವೆಲ್ಲರೂ ಉದ್ಯೋಗ ಪಡೆದುಕೊಂಡು ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಶ್ರಮವಹಿಸಬೇಕು. ಒಂದೇ ಸೂರಿನಡಿಯಲ್ಲಿ 83ಕ್ಕಿಂತ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಿದ್ದು , ಉತ್ತಮ ಮನೋಭಾವದಿಂದ ಉದ್ಯೋಗ ಆಕಾಂಕ್ಷಿಗಳು ತಮಗೆ ಇಷ್ಟವಾದ ಕಂಪನಿಗಳಲ್ಲಿ ಸಂದರ್ಶನವನ್ನು ನೀಡಿ ಉದ್ಯೋಗ ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಲ್ನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮೇಘರಾಜ್, ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಚೆನ್ನವೀರಪ್ಪ, ಸಹಕಾರಧೂರೀಣ ಬಿ.ಡಿ. ಬುಕಾಂತ, ಯುವ ಮುಖಂಡ ಬಸವರಾಜ್, ಪುರಸಭೆಯ ಮಾಜಿ ಅಧ್ಯಕ್ಷ ವಸಂತ್ ಗೌಡ್ರು, ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಶಿವಕುಮಾರ್, ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ವರ್ಗದವರು, ಆಳ್ವಾಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಮತ್ತು ಸ್ವಯಂ ಸೇವಕರು, ನೊಂದಾಯಿತ 83 ಕಂಪನಿಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಯವರು,ಅಲ್ಲದೆ 2000ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೆ.ಆರ್ ಸಿ ಎಸ್ ನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಗಳು ಮತ್ತು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಿವಕುಮಾರ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ವೀರೇಂದ್ರ ಕುಮಾರ್ ವಾಲಿ ವಂದಿಸಿ, ಕೋಟೋಜಿರಾವ್ ರವರು ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Alwas Educational InstituteB S YadiyurappaJob FairKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaShikaripuraShimogaShivamoggaNewsಆಳ್ವಾಸ್ ವಿದ್ಯಾ ಸಂಸ್ಥೆಯಬಿ.ಎಸ್. ಯಡಿಯೂರಪ್ಪನವರಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share201Tweet126Send
Previous Post

ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

Next Post

ಮಾರಿಕಾಂಬ ಜಾತ್ರೆ | ಶ್ರೀ ಹರಕೆರೆ ಕಾಳಿಕಾಂಬ ದೇವಸ್ಥಾನದ ವತಿಯಿಂದ ದೇವಿಗೆ ಪ್ರಥಮ ಪೂಜೆ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರಿಕಾಂಬ ಜಾತ್ರೆ | ಶ್ರೀ ಹರಕೆರೆ ಕಾಳಿಕಾಂಬ ದೇವಸ್ಥಾನದ ವತಿಯಿಂದ ದೇವಿಗೆ ಪ್ರಥಮ ಪೂಜೆ 

ಮಾರಿಕಾಂಬ ಜಾತ್ರೆ | ಶ್ರೀ ಹರಕೆರೆ ಕಾಳಿಕಾಂಬ ದೇವಸ್ಥಾನದ ವತಿಯಿಂದ ದೇವಿಗೆ ಪ್ರಥಮ ಪೂಜೆ 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

April 27, 2026
ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

April 27, 2026
ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

April 27, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 27, 2026
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

April 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL