ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ #CMSiddaramaiah ಅವರು ತಮ್ಮ ರಾಜಕೀಯ ಜೀವನದ 17ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿ ರಾಜ್ಯದ ಮೇಲೆ ಲಕ್ಷಾಂತರ ಕೋಟಿ ರೂ. ವೆಚ್ಚದ ಸಾಲದ ಹೊರೆಯನ್ನು ಹೊರಿಸಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ #State Budget ಮಂಡಿಸಿರುವ ಸಿದ್ದರಾಮಯ್ಯ ಅವರು ರಾಜ್ಯದ ಮೇಲೆ ಈ ಬಾರಿ 1.32 ಲಕ್ಷ ಕೋಟಿ ರೂ. ಸಾಲದ ಹೊರೆಯನ್ನು ಹೊರಿಸಿದ್ದಾರೆ.
ಈ ಬಾರಿ ಒಟ್ಟಾರೆಯಾಗಿ 4.48 ಲಕ್ಷ ಕೋಟಿ ರೂ. ವೆಚ್ಚದ ಬೃಹತ್ ಗಾತ್ರ ಬಜೆಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ್ದಾರೆ. ಇದು ಕಳೆದ ವರ್ಷದ ಬಜೆಟ್’ಗಿಂತಲೂ 40 ಸಾವಿರ ಕೋಟಿ ರೂ. ಅಧಿಕವಾಗಿದೆ.
ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















