ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದ್ದು, ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ #State Budget ಭಾಷಣದಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಹೊಸ ಉದ್ಯೋಗ ಸೃಷ್ಟಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಸಿಎಂ ತಿಳಿಸಿದರು.
ಈ ವೇಳೆ ಸುಮಾರು 56 ಸಾವಿರ ಸರ್ಕಾರಿ ಉದ್ಯೋಗಗಳ #Government Job ಭರ್ತಿಗೆ ಸರ್ಕಾರ ಸಜ್ಜಾಗಿದೆ ಎಂದು ಘೋಷಿಸಿದರು. ಇದರಿಂದ ನಿರುದ್ಯೋಗ ಸಮಸ್ಯೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ ಎಂದಿದ್ದಾರೆ.
ಇನ್ನು ಇದರೊಟ್ಟಿಗೆ ಕರ್ನಾಟಕದ 50ಕ್ಕೂ ಹೆಚ್ಚು ಉತ್ಪನ್ನಗಳಿಗೆ ಎಐ ಮಾನ್ಯತೆ ದೊರೆತಿರುವುದರಿಂದ ರಾಜ್ಯದ ವ್ಯಾಪಾರ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಉತ್ತೇಜನ ದೊರೆತಿದೆ ಎಂದು ಅವರು ಹೇಳಿದರು. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲೂ ರಾಜ್ಯವು ಕ್ರಾಂತಿಕಾರಿ ಬೆಳವಣಿಗೆ ಸಾಧಿಸಿದೆ ಎಂದು ವಿವರಿಸಿದರು.
ಕರ್ನಾಟಕ 45 ಉತ್ಪನ್ನಗಳಿಗೆ ಎಐ ಮಾನ್ಯತೆ ದೊರೆತಿದೆ. ಮುಜರಾಯಿ ಇಲಾಖೆ #Mujarai Department ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















