ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ 16 ವರ್ಷದ ಒಳಗಿನ ಮಕ್ಕಳ ಸೋಷಿಯಲ್ ಮೀಡಿಯಾ ಬ್ಯಾನ್ #Social Media Ban ಮಾಡಲಾಗಿದೆ.
ಈ ಕುರಿತಂತೆ ತಮ್ಮ ಬಜೆಟ್ #State Budget ಭಾಷಣದಲ್ಲಿ ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, #CM Siddaramaiah 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆಯನ್ನು ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದ್ದು, ಇದರಿಂದಾಗಿ ಹಲವು ರೀತಿಯಲ್ಲಿ ದುಷ್ಟರಿಣಾಮ ಬೀರುತ್ತಿದೆ. ಹೀಗಾಗಿ, ಮಕ್ಕಳಲ್ಲಿ ಮೊಬೈಲ್ #Mobile ಗೀಳು ಹಾಗೂ ಸೋಷಿಯಲ್ ಮೀಡಿಯಾದಿಂದ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಶಾಲೆಗಳಲ್ಲೂ ಸಹ ಸೋಷಿಯಲ್ ಮೀಡಿಯಾ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಬಜೆಟ್‌ನಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















