ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ವತಿಯಿಂದ ತಾಲ್ಲೂಕಿನ ರೇಚಿಕೊಪ್ಪ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 7 ದಿನಗಳ ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ನಗರದ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ರೇಚಿಕೊಪ್ಪ ಗ್ರಾಮದ ಒಟ್ಟು 51 ಜನರು ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ರೇಚಿಕೊಪ್ಪದ ಗ್ರಾಮದ ಮುಖಂಡರು, ರಾಸೇಯೋ ಕಾರ್ಯಕ್ರಮಾಧಿಕಾರಿ ಭವ್ಯ ವಿ, ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಹೆಚ್ ಸಿ, ರವಿಕುಮಾರ್ ಜಿ ಬಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹೇಂದ್ರ ಮತ್ತು ಕಾಲೇಜಿನ ಅಧ್ಯಾಪಕ ವೃಂದದವರು, ಗ್ರಾಮಸ್ಥರು ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















